Advertisement
ಈ ಕುರಿತು ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ನಿಯಂತ್ರಣದ ಕುರಿತು ಸರಕಾರ ಜಿಲ್ಲಾಡಳಿತಕ್ಕೆ ನೀಡಿರುವ ನಿರ್ದೇಶನದಂತೆ ತಜ್ಞರೊಂದಿಗೆ ಸಮಾಲೋಚಿಸಿ ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಅನ್ನು ರದ್ದುಗೊಳಿಸಲು ತೀರ್ಮಾನಿಸಿದ್ದು ಅದರಂತೆ ಇಂದಿನಿಂದಲೇ ಜಾರಿಗೆ ಬರುವಂತೆ ವಾರಾಂತ್ಯದ ಕರ್ಫ್ಯೂ ರದ್ದುಪಡಿಸಲಾಗಿದೆ ಎಂದರು.
Related Articles
ಜಿಲ್ಲೆಯಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಉಪಯೋಗಿಸುವಂತೆ ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಮನವಿ ಮಾಡಿದರು,
Advertisement
ಅಕ್ಟೋಬರ್ ವರೆಗೆ ಕೇರಳ – ಕರ್ನಾಟಕ ಪ್ರವೇಶ ನಿರ್ಬಂಧಕೇರಳದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರ ಪ್ರವೇಶವನ್ನು ಅಕ್ಟೋಬರ್ ವರೆಗೆ ನಿರ್ಬಂಧಿಸಲಾಗಿದೆ ಅದೇ ರೀತಿ ಕರ್ನಾಟಕದಿಂದ ಕೇರಳಕ್ಕೆ ತೆರಳುವವರು ಅದೇ ಆದೇಶವನ್ನು ಪಾಲಿಸಬೇಕೆಂದು ತಿಳಿಸಿದರು.