Advertisement

ಉಡುಪಿ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ ರದ್ದು :ನೈಟ್ ಕರ್ಫ್ಯೂ ಮುಂದುವರಿಕೆ : ಕೂರ್ಮ ರಾವ್

01:29 PM Sep 10, 2021 | Team Udayavani |

ಉಡುಪಿ : ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Advertisement

ಈ ಕುರಿತು ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ನಿಯಂತ್ರಣದ ಕುರಿತು ಸರಕಾರ ಜಿಲ್ಲಾಡಳಿತಕ್ಕೆ ನೀಡಿರುವ ನಿರ್ದೇಶನದಂತೆ ತಜ್ಞರೊಂದಿಗೆ ಸಮಾಲೋಚಿಸಿ ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಅನ್ನು ರದ್ದುಗೊಳಿಸಲು ತೀರ್ಮಾನಿಸಿದ್ದು ಅದರಂತೆ ಇಂದಿನಿಂದಲೇ ಜಾರಿಗೆ ಬರುವಂತೆ ವಾರಾಂತ್ಯದ ಕರ್ಫ್ಯೂ ರದ್ದುಪಡಿಸಲಾಗಿದೆ ಎಂದರು.

ನೈಟ್ ಕರ್ಫ್ಯೂ ಎಂದಿನಂತೆ ಜಾರಿಯಲ್ಲಿದ್ದು ಸಾರ್ವಜನಿಕರು ಆದೇಶಗಳನ್ನು ಪಾಲಿಸಿಕೊಂಡು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ :ಸನ್ನಡತೆಗಳಿಂದ ಅಭಿವೃದ್ಧಿಯ ಗುರಿ ತಲುಪಲು ಸಾಧ್ಯ: ದಿನೇಶ್‌ ಕೆ. ಸನಿಲ್‌

18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಹಾಕಿಸಿ :
ಜಿಲ್ಲೆಯಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಉಪಯೋಗಿಸುವಂತೆ ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಮನವಿ ಮಾಡಿದರು,

Advertisement

ಅಕ್ಟೋಬರ್ ವರೆಗೆ ಕೇರಳ – ಕರ್ನಾಟಕ ಪ್ರವೇಶ ನಿರ್ಬಂಧ
ಕೇರಳದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರ ಪ್ರವೇಶವನ್ನು ಅಕ್ಟೋಬರ್ ವರೆಗೆ ನಿರ್ಬಂಧಿಸಲಾಗಿದೆ ಅದೇ ರೀತಿ ಕರ್ನಾಟಕದಿಂದ ಕೇರಳಕ್ಕೆ ತೆರಳುವವರು ಅದೇ ಆದೇಶವನ್ನು ಪಾಲಿಸಬೇಕೆಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next