Advertisement

ದಕ್ಷಿಣ ಕನ್ನಡ : ವಾರಾಂತ್ಯ ಕರ್ಫ್ಯೂ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

09:11 PM Jun 25, 2021 | Team Udayavani |

ಮಹಾನಗರ: ದಕ್ಷಿಣ ಕನ್ನಡದಲ್ಲಿ ಕೊರೊನಾ ನಿಯಂತ್ರಣಕ್ಕೆ ವಾರಾಂತ್ಯ ಕರ್ಫ್ಯೂ ಸಂದರ್ಭ ಸಂಪೂರ್ಣ ಲಾಕ್‌ಡೌನ್‌ ಇದ್ದು, ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಗುರುವಾರ ಜಿಲ್ಲೆಯ ತಾಲೂಕು ಪಂಚಾಯತ್‌ಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಜತೆಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೂ. 28ರ ಬೆಳಗ್ಗೆ 7ರ ವರೆಗೆ ಸಂಪೂರ್ಣ ಲಾಕ್‌ಡೌನ್‌ ಇರಲಿದ್ದು, ಹಾಲು ವಿತರಣೆ ಕೇಂದ್ರಗಳು, ಆಸ್ಪತ್ರೆ, ಕೆಲವು ಸರಕಾರಿ ಕಚೇರಿಗಳನ್ನು ಮಾತ್ರ ತೆರೆಯಲು ಅವಕಾಶವಿದೆ. ಇತರ ಯಾವುದೇ ಚಟುವಟಿಕೆಗಳು ಇಲ್ಲದಿರುವುದರಿಂದ ಜನರ ಓಡಾಟದ ಆವಶ್ಯಕತೆಯೂ ಇರುವುದಿಲ್ಲ. ಸಂಪೂರ್ಣ ಬಂದ್‌ ಮಾಡುವುದರಿಂದ ಕೊರೊನಾ ಹರಡುವಿಕೆ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯ ಎಂದರು.

ಇದನ್ನೂ ಓದಿ :ನಗರಗಳಲ್ಲಿ ಸಂಪೂರ್ಣ ಅನ್‌ಲಾಕ್‌ ಜಾರಿಗೊಳಿಸಲು ಸಾಧ್ಯವಿಲ್ಲ: ಗೌರವ್‌ ಗುಪ್ತ

ಪರೀಕ್ಷೆ ಗುರಿ ಸಾಧಿಸಿ
ಜಿ.ಪಂ. ಸಿಇಒ ಡಾ| ಕುಮಾರ್‌ ಮಾತನಾಡಿ, ತಾಲೂಕುಗಳಿಗೆ ಪ್ರತೀ ದಿನ ನಿಗದಿ ಪಡಿಸಿರುವ ಕೊರೊನಾ ಪರೀಕ್ಷೆಯ ಗುರಿಯನ್ನು ಸಾಧಿಸ ಬೇಕು; ಜಿಲ್ಲೆಯಲ್ಲಿ ಸುಳ್ಯ ತಾಲೂಕನ್ನು ಹೊರತುಪಡಿಸಿದರೆ ಇತರ ತಾಲೂಕುಗಳಲ್ಲಿ ನಿಗದಿತ ಗುರಿ ಮುಟ್ಟುತ್ತಿಲ್ಲ; ಹೀಗಾಗದಂತೆ ಮುಂದಿನ ದಿನಗಳಲ್ಲಿ ನೋಡಿಕೊಳ್ಳಬೇಕು ಎಂದರು.

Advertisement

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಸೋನಾವಣೆ, ಎಡಿಸಿ ಡಾ| ಪ್ರಜ್ಞಾ ಅಮ್ಮೆಂಬಳ, ಎಸಿ ಮದನ ಮೋಹನ್‌, ಡಿಎಚ್‌ಒ ಡಾ| ಕಿಶೋರ್‌ ಕುಮಾರ್‌ ಮೊದಲಾದವರಿದ್ದರು.

ಡಿಸಿ ಸೂಚನೆಯ ಮುಖ್ಯಾಂಶಗಳು
– ಕೆಮ್ಮು, ಶೀತ, ಜ್ವರ ಬಂದವರಿಗೆ ಕ್ಲಿನಿಕ್‌ಗಳಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅಂತಹ ರೋಗಿಗಳ ಕೊರೊನಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಮಾಡಲೇಬೇಕು.
– ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬಂದಿ ಕೊರೊನಾ ಪೂರ್ಣ ಮುಕ್ತವಾಗಿದೆ ಎಂಬ ಮನೋಭಾವವನ್ನು ಹೊಂದದಿರಿ.
– ಸೋಂಕಿತರನ್ನು ಕಡ್ಡಾಯವಾಗಿ ಕೇರ್‌ ಸೆಂಟರ್‌ಗೆ ದಾಖಲಿಸಿ.
– ಕೊರೊನಾ ನಿರೋಧಕ ಚುಚ್ಚು ಮದ್ದುಗಳನ್ನು ಅಂದಂದೇ ಪೂರ್ಣ ಪ್ರಮಾಣದಲ್ಲಿ ನೀಡಲು ಯೋಜನೆ ರೂಪಿಸಿ. ಇದಕ್ಕಾಗಿ ನಿವೃತ್ತ ವೈದ್ಯರ ಬಳಕೆ ಸೂಕ್ತ.

ಅಂಗಡಿಗೆ ಮಕ್ಕಳನ್ನು ಕರೆತಂದರೆ ದಂಡ
3ನೇ ಅಲೆಯಲ್ಲಿ ಮಕ್ಕಳನ್ನು ಸೋಂಕು ಬಾಧಿಸುವ ಸಂಭವ ಇರುವ ಕಾರಣ ಹೆತ್ತವರು ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು. ಅಂಗಡಿ ಮುಂಗಟ್ಟುಗಳಿಗೆ ಕರೆತಂದರೆ ಅಂತಹವರಿಗೆ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ದ.ಕ. ಜಿಲ್ಲೆಯೊಳಗೆ ಕೆಎಸ್ಸಾರ್ಟಿಸಿ ಬಸ್‌ ಸಂಚಾರವಿಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ವೇಳೆ ಜನಸಂಚಾರ, ವಾಹನ ಓಡಾಟಕ್ಕೆ ನಿರ್ಬಂಧ ಹೇರಲಾಗಿದ್ದು, ಜಿಲ್ಲಾ ವ್ಯಾಪ್ತಿಯೊಳಗೆ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಯಾವುದೇ ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಇರುವುದಿಲ್ಲ. ಹೊರ ಜಿಲ್ಲೆಗಳಿಗೆ ತೆರಳುವ ಬಸ್‌ಗಳು ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಕಾರ್ಯಾಚರಣೆ ನಡೆಸಲಿವೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next