Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ವಾರಾಂತ್ಯ ಕರ್ಫ್ಯೂ 

12:31 AM Aug 13, 2021 | Team Udayavani |

ಮಂಗಳೂರು: ಗಡಿ ಜಿಲ್ಲೆಯಲ್ಲಿ ಕೊರೊನಾ ಉಲ್ಬಣ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಾದ್ಯಂತ ವಾರಾಂತ್ಯ ಕರ್ಫ್ಯೂ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ಜಾರಿಯಲ್ಲಿರಲಿದೆ. ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ. ಆದರೆ ರಾತ್ರಿ ಕರ್ಫ್ಯೂ ಚಾಲ್ತಿಯಲ್ಲಿದೆ.

Advertisement

ಈ ವೇಳೆ ಅಗತ್ಯ ವಸ್ತುಗಳ ಖರೀದಿಗೆ ಅಪರಾಹ್ನ 2 ಗಂಟೆಯವರೆಗೆ ಅವಕಾಶವಿರಲಿದೆ. ಉಳಿದಂತೆ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಶನಿವಾರ ನಡೆಯಲಿರುವ ವಿ.ವಿ. ಪದವಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ರವಿವಾರ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ಕೂಡ ನಿಗದಿತ ಸಿಬಂದಿ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಇಲ್ಲದೆ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next