ಬೆಂಗಳೂರು: ಆರೋಗ್ಯದ ದೃಷ್ಟಿಯಿಂದ ತಜ್ಞರು ಅಭಿಪ್ರಾಯ ಹೇಳುತ್ತಾರೆ. ಕೇಂದ್ರದ ಸಚಿವರು ಸೇರಿ ಹಲವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಇದೆಲ್ಲ ಗಮನಿಸಿ, ವಿಶೇಷವಾಗಿ ತಜ್ಞರ ಅಭಿಪ್ರಾಯ ಆಧರಿಸಿ ನಿರ್ಧಾರ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಭೆಯಿದೆ. ತಜ್ಞರು ಸಭೆಯಲ್ಲೇ ಅಭಿಪ್ರಾಯ ತಿಳಿಸುತ್ತಾರೆ. ಮುಂದಿನ ಕೊವೀಡ್ ಪರಿಣಾಮ ನೋಡಿಕೊಂಡು, ಎಲ್ಲಾ ಆಯಾಮಗಳಿಂದಲೂ ಚರ್ಚಿಸಿ ಒಂದು ಸೂಕ್ತ ನಿರ್ಧಾರ ಮಾಡುತ್ತೇವೆ. ವೈಜ್ಞಾನಿಕ ದೃಷ್ಟಿಕೋನಗಳಿಂದ ಅವಲೋಕಿಸಿ ವೀಕೆಂಡ್ ಕರ್ಫ್ಯೂ ವಿಚಾರ ಸೇರಿ ಎಲ್ಲದರ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದರು.
ಇದನ್ನೂ ಓದಿ:ಶಾಶ್ವತವಾಗಿ ನಂದಲಿದೆ 50 ವರ್ಷಗಳಿಂದ ಬೆಳಗಿದ ಇಂಡಿಯಾ ಗೇಟ್ ಅಮರ್ ಜವಾನ್ ಜ್ಯೋತಿ!
ಕೋವಿಡ್ ಪರಿಹಾರದ ಚೆಕ್ ಬೌನ್ಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ಯಾದಗಿರಿಯಲ್ಲಿ ಈ ಪ್ರಕರಣ ನಡೆದಿದೆ. ಪರಿಶೀಲಿಸಿ ಸರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತುಮಕೂರಿನ ಸಿದ್ದಗಂಗಾಮಠದಲ್ಲಿ ‘ ದಾಸೋಹ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು ಸರ್ಕಾರ ಕಾಯಕ ರೂಪದಲ್ಲಿ ಮಾಡುತ್ತಿದೆ ಎಂದರು.