Advertisement

ಗಮನಿಸಿ: ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮದುವೆಯಾಗುವುದಾದರೆ ಈ ನಿಯಮಗಳನ್ನು ಪಾಲಿಸಲೇಬೇಕು!

04:05 PM Apr 21, 2021 | Team Udayavani |

ಮಂಗಳೂರು: ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟಿಸಿದೆ. ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಲಾಕ್ ಡೌನ್ ಮಾಡಲಾಗಿದೆ. ಆದರೆ ಈ ಸಮಯದಲ್ಲಿ ಮದುವೆ ಸಮಾರಂಭಗಳನ್ನು ನಿಗದಿಯಾದವರಿಗೆ ಹಲವು ಸಂದೇಹಗಳು ಕಾಡಿದ್ದು, ಮಂಗಳೂರಿನಲ್ಲಿ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಕಮಿಷನರ್ ಶಶಿಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಕುರಿತಂತೆ ಮಾಹಿತಿ ನೀಡಿದರು.

Advertisement

ನಿಯಮಗಳು:

ವೀಕೆಂಡ್ ಕರ್ಫ್ಯೂ ಸಮಯದಲ್ಲಿ ನಿಗದಿಯಾಗಿದ್ದ ಮದುವೆ ನಡೆಸಲು ಅನುಮತಿ ಇದೆ. ಆದರೆ ಕೇವಲ 50 ಜನರು ಮಾತ್ರ ಮದುವೆಯಲ್ಲಿ ಭಾಗವಹಿಸಲು ಅವಕಾಶವಿದೆ. ಇದಕ್ಕಾಗಿ ಮದುವೆ ಮನೆಯವರು ಆರಂಭದಲ್ಲಿಯೇ 50 ಜನರ ಪಟ್ಟಿ ತಯಾರಿಸಬೇಕು. ಆ ಪಟ್ಟಿಯನ್ನು ಸ್ಥಳೀಯಾಡಳಿತಕ್ಕೆ ತೋರಿಸಿ ಅನುಮತಿ ಪಡೆದುಕೊಳ್ಳಬೇಕು.

ಇದನ್ನೂ ಓದಿ:ಸಂಬಳ ಕೊಡದೆ ಮೋಸ ಮಾಡಿದ್ದ ನಿರ್ಮಾಪಕ : ಸಂಕಷ್ಟದ ಸಮಯ ಮೆಲುಕು ಹಾಕಿದ ಜಗ್ಗಣ್ಣ  

ಆ ಬಳಿಕ ಆ 50 ಜನರ ಅನುಮತಿ ಪಡೆದ ಪತ್ರ ಮತ್ತು ಮದುವೆ ಆಮಂತ್ರಣ ಪತ್ರಿಕೆ ಹಾಗೂ ಮದುವೆಗೆ ಹೋಗುವವರ ಐಡಿ ಕಾರ್ಡ್ ಕಡ್ಡಾಯವಾಗಿದ್ದು, ಈ ಮೂರು ದಾಖಲೆಗಳನ್ನು ವಾಟ್ಸ್ ಅಪ್ ನಲ್ಲಿ ಪೊಲೀಸರಿಗೆ ತೋರಿಸಿ ಪ್ರಯಾಣಿಸಬಹುದು. ಆದರೆ ಮದುವೆ ಆಮಂತ್ರಣ ಪತ್ರಿಕೆಯ ನೈಜ ಪ್ರತಿ ಪ್ರಯಾಣದ ವೇಳೆ ಕೈಯಲ್ಲಿರಲೇಬೇಕು. ಮದುವೆಗೆ ಗೆಸ್ಟ್ ಲಿಸ್ಟ್ ನಲ್ಲಿರುವವರ ಐಡಿ ತೋರಿಸಿದರಷ್ಟೇ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು.

Advertisement

ಮದುವೆಗೆ ಹೋಗುವ ಕಾರಿನಲ್ಲಿ ಏಳೆಂಟು ಜನರನ್ನು ತುಂಬಿದರೆ ಪ್ರಯಾಣಿಸಲು ಅವಕಾಶವಿಲ್ಲ. ಈಗಾಗಲೇ ಮಾಡಿದ ನಿಯಮದಂತೆ ದೇವಸ್ಥಾನಗಳಲ್ಲಿ ‌ಮದುವೆಗೆ ಅನುಮತಿ ನೀಡಲಾಗಿದೆ. ದೇವಸ್ಥಾನದಲ್ಲಿ ಮದುವೆ ನಡೆಯುವುದಾದರೆ 50 ಜನರನ್ನು ಸೇರಿಸಿ ಮಾಡಬಹುದು. ಮದುವೆ ಫೋಟೋಗ್ರಾಫರ್ಸ್, ಅರ್ಚಕರು ಎಲ್ಲರೂ 50 ಜನರ ಲಿಸ್ಟ್ ನಲ್ಲೇ ಬರುತ್ತಾರೆ.

ದೇವಸ್ಥಾನದ ಧಾರ್ಮಿಕ ಕಾರ್ಯಗಳನ್ನು ಅರ್ಚಕರು ಸೇರಿಕೊಂಡು ಮಾಡಬೇಕು. ಆದರೆ ಯಾವುದೇ ಸಾರ್ವಜನಿಕರು ಈ ಆಚರಣೆಯಲ್ಲಿ ಭಾಗಿಯಾಗಲು ನಿಷೇಧವಿದೆ. ಈ ಆದೇಶ ಇವತ್ತಿನಿಂದಲೇ ಜಿಲ್ಲೆಯ ಎಲ್ಲಾ ದೇವಸ್ಥಾನಗಳಲ್ಲಿ ಜಾರಿಯಾಗಲಿದೆ.

ಇದನ್ನೂ ಓದಿ: 5 ತಿಂಗಳ ಗರ್ಭಿಣಿಯಾಗಿದ್ದರೂ ಲಾಟಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ..!

ಅವಶ್ಯಕತೆ ಪಾಸ್ ಮತ್ತು ಐಡಿ ಕಾರ್ಡ್ ಬಳಸಿ ಕುಟುಂಬದ ಜೊತೆ ಸಂಚರಿಸಲು ಅವಕಾಶವಿಲ್ಲ. ಯಾರ ಹೆಸರಿನಲ್ಲಿ ಪಾಸ್ ಮತ್ತು ಐಡಿ ಕಾರ್ಡ್ ಇದೆಯೋ ಅವರಿಗಷ್ಟೇ ಸಂಚಾರಕ್ಕೆ ಅವಕಾಶ.

ವೀಕೆಂಡ್ ‌ಕರ್ಫ್ಯೂ ಸಮಯದಲ್ಲಿ ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಇದೆ. ಅದರೆ ಈ ವಸ್ತು ಖರೀದಿ ಅವರ ಮನೆಯ ಅಕ್ಕಪಕ್ಕದಲ್ಲೇ ಖರೀದಿಸಬೇಕು.

ವಾಹನ ಬಳಸಿ ಅಗತ್ಯ ವಸ್ತು ಖರೀದಿಗೆ ಹೋಗುವುದಾದರೂ ಅದಕ್ಕೆ ಸೂಕ್ತ ಕಾರಣ ಬೇಕು. ಅದನ್ನು ದುರುಪಯೋಗ ಪಡಿಸಿಕೊಂಡರೆ ಅಂಥವರ ವಿರುದ್ದ ಕಾನೂನು ಕ್ರಮ.

Advertisement

Udayavani is now on Telegram. Click here to join our channel and stay updated with the latest news.

Next