Advertisement

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

11:56 AM Jun 18, 2021 | Team Udayavani |

ಉಡುಪಿ: ಕೋವಿಡ್ 19 ಸೋಂಕು ಪ್ರಸರಣ ಕಡಿಮೆ ಮಾಡುವ ಉದ್ದೇಶದಿಂದ ಎರಡು ದಿನಗಳ ಕಾಲ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.

Advertisement

ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ ಈ ಕೆಳಕಂಡ ಚಟುವಟಿಕೆಗಳನ್ನು ಬಿಟ್ಟು ಉಳಿದೆಲ್ಲಾ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ ಎಂದಿದ್ದಾರೆ.

-ಅಗತ್ಯ ವಸ್ತುಗಳ ಖರೀದಿಗೆ ( ಆಹಾರ, ದಿನಸಿ, ಹಣ್ಣು ತರಕಾರಿ, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು) ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 62,480 ಕೋವಿಡ್ ಪ್ರಕರಣ ಪತ್ತೆ, 1,587 ಸಾವು

-ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಿಗೆ ಬೆಳಗ್ಗೆ6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

Advertisement

-ಹೋಂ ಡೆಲಿವರಿ, ಹೋಟೆಲ್ ಪಾರ್ಸಲ್, ರೋಗಿ- ಪರಿಚಾರಕರಿಗೆ ತೆರಳಲು ಅವಕಾಶ ಕಲ್ಪಸಲಾಗಿದೆ. ಅಗತ್ಯ ವಸ್ತುಗಳ ಸರಬರಾಜು ಮಾಡಲು ಅವಕಾಶವಿದೆ.

-ದೂರದ ಊರಿನಿಂದ ರೈಲು, ವಿಮಾನದಲ್ಲಿ ಬರುವವರಿಗೆ ಮನೆ ಸೇರಲು ಖಾಸಗಿ ವಾಹನ ಅಥವಾ ಟ್ಯಾಕ್ಸಿಗಳ ಓಡಾಟಕ್ಕೆ ಅನುಮತಿಸಲಾಗಿದೆ.

-ಈಗಾಗಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳನ್ನು ಸರಳವಾಗಿ ಮನೆಯಲ್ಲಿಯೇ ನಡೆಸಲು ಅನುಮತಿ ನೀಡಲಾಗಿದೆ. ಆದರೆ  40 ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ.

ಇದನ್ನೂ ಓದಿ: ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ: ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ದ ದೂರು

-ಅಂತ್ಯ ಸಂಸ್ಕಾರಕ್ಕೆ ಐದು ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ.

-ಆದರೆ ಈ ಎರಡು ದಿನ ಕಾರ್ಖಾನೆಗಳು ಕಾರ್ಯ ನಿರ್ವಹಿಸುವಂತಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next