Advertisement

ವಾರಾಂತ್ಯ ಕರ್ಫ್ಯೂ: ದ.ಕ.ದಲ್ಲಿ ಇನ್ನೆರಡು ದಿನ ದಿನಸಿ, ತರಕಾರಿ ಅಲಭ್ಯ

10:38 PM Jun 24, 2021 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಹಾಲು, ಪೇಪರ್‌, ಮೆಡಿಕಲ್‌ ಹಾಗೂ ತುರ್ತು ಸೇವೆಗಳಿಗಷ್ಟೇ ಅವಕಾಶ ಕಲ್ಪಿಸಲಾಗಿದೆ. ದಿನಸಿ ಅಂಗಡಿ, ಮದ್ಯದಂಗಡಿ ಸೇರಿದಂತೆ ಇತರ ಎಲ್ಲವೂ ಬಂದ್‌ ಆಗಲಿವೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

Advertisement

ಎಲ್ಲ ರಾಜ್ಯ ಮತ್ತು ಕೇಂದ್ರ ಸರಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ತುರ್ತು ಅಗತ್ಯ ಸೇವೆಗಳು ಮತ್ತು ಕೊರೊನಾ ಕಂಟೈನ್‌ಮೆಂಟ್‌ ಕರ್ತವ್ಯಗಳ ನಿರ್ವಹಣೆಗೆ ಅನುಮತಿ ಇರಲಿದೆ. ಸಂಬಂಧಿತ ಅಧಿಕಾರಿಗಳು ಮತ್ತು ಸಿಬಂದಿಯ ಸಂಚಾರಕ್ಕೆ ಅನುಮತಿ ಇದೆ.

ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24×7 ಕಾರ್ಯಾಚರಣೆಗಳ ಅಗತ್ಯವಿರುವ ಎಲ್ಲ ಕೈಗಾರಿಕೆಗಳು/ ಕಂಪೆನಿಗಳು/ ಸಂಸ್ಥೆಗಳು ಕಾರ್ಯ ನಿರ್ವಹಿಸಬಹುದು. ಅಂತಹ ನೌಕರರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು. ಸಾಧ್ಯವಾದಷ್ಟು ಮಟ್ಟಿಗೆ ನೌಕರರನ್ನು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಎಪಿಎಂಸಿ ಮಾರ್ಕೆಟ್‌ ಬಂದ್‌ :

ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಎಪಿಎಂಸಿಯ ಬೈಕಂಪಾಡಿ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ವ್ಯಾಪಾರ ಸಹಿತ ಎಲ್ಲ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

  • ಟೆಲಿಕಾಂ ಮತ್ತು ಇಂಟರ್‌ನೆಟ್‌ ಸೇವೆಯ ನೌಕರರು ಅವರ ವಾಹನಗಳಲ್ಲಿ ಸಂಸ್ಥೆಯ ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು. ಐಟಿ ಮತ್ತು ಐಟಿಇಎಸ್‌ ಕಂಪೆನಿಗಳು, ಸಂಸ್ಥೆಯ ಅಗತ್ಯ ಸಿಬಂದಿ, ನೌಕರರು ಮಾತ್ರವೇ ಕಚೇರಿಯಿಂದ ಕಾರ್ಯ ನಿರ್ವಹಿಸುವುದು.
  • ರೋಗಿಗಳು ಮತ್ತು ಪರಿಚಾರಕರು/ ತುರ್ತು ಅಗತ್ಯವಿರುವ ವ್ಯಕ್ತಿಗಳು, ಲಸಿಕೆ ತೆಗೆದುಕೊಳ್ಳುವವರಿಗೆ ದಾಖಲೆಗಳೊಂದಿಗೆ ಸಂಚಾರಕ್ಕೆ ಅನುಮತಿ ಇರುತ್ತದೆ.
  • ರೆಸ್ಟೋರೆಂಟ್‌, ಹೊಟೇಲ್‌ಗಳಿಂದ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮತ್ತು ಹೋಂ ಡೆಲಿವರಿಗೆ ಮಾತ್ರ ಅನುಮತಿ.
  • ಅಂತರ್‌ ಜಿಲ್ಲಾ ಬಸ್‌ಗಳು, ರೈಲುಗಳು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ಇದೆ. ವಿಮಾನ ನಿಲ್ದಾಣಗಳು, ಬಸ್‌ ಟರ್ಮಿನಲ್‌ಗಳು/ ರೈಲು ನಿಲ್ದಾಣಗಳಿಗೆ ಸಾರ್ವಜನಿಕ ಸಾರಿಗೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅವಕಾಶ ಇದೆ. ಪ್ರಯಾಣದ ದಾಖಲೆ ಕೈಯಲ್ಲಿರಬೇಕು.
  • ಪೂರ್ವ ನಿಗದಿತ ಮದುವೆಗೆ ಮನೆಯಲ್ಲಿ ಮಾತ್ರ ಅವಕಾಶ. ಗರಿಷ್ಠ 25 ಜನರ ಪಾಲ್ಗೊಳ್ಳುವಿಕೆಯಲ್ಲಿ ನಡೆಸಬಹುದು.
  • ಅಂತ್ಯಸಂಸ್ಕಾರಕ್ಕೆ ಗರಿಷ್ಠ 5 ಜನರ ಮಿತಿ
Advertisement
Advertisement

Udayavani is now on Telegram. Click here to join our channel and stay updated with the latest news.

Next