Advertisement
ಕರ್ಫ್ಯೂ ಪಾಲಿಸಲು ನಗರದ ಜನತೆ ಬೆಂಬಲ ನೀಡುತ್ತಿದ್ದಾರೆ. ಇಡೀ ಜಿಲ್ಲೆಯಲ್ಲಿ ಜನಜೀವನ ಸ್ತಬ್ಧಗೊಂಡಿದೆ. ಸಾರ್ವಜನಿಕರು ಮನೆಯಿಂದ ಹೊರಬಾರದೇ ಮನೆಗಳಲ್ಲೇ ಲಾಕ್ ಆಗಿದ್ದಾರೆ. ವಾಹನ ಸಂಚಾರವೂ ಸಂಫೂರ್ಣ ಬಂದ್ ಆಗಿದೆ.
Related Articles
Advertisement
ಅಗತ್ಯ ವಸ್ತುಗಳ ಸೇವೆಗೆ ಬೆಳಿಗ್ಗೆ 6 ರಿಂದ 10ರವರೆಗೆ ಅವಕಾಶ ನೀಡಲಾಗಿತ್ತು. ನಂತರ ಎಲ್ಲರನ್ನು ಮನೆಗೆ ಕಳುಹಿಸಲು ಪೊಲೀಸರು ಕಾರ್ಯಾಚರಣೆ ಮೂಲಕ ಬಂದ್ ಮಾಡಿಸಿದರು.
ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲ ಬಸ್ ಗಳು ಸಂಚಾರ ನಡೆಸಿದ್ದು, ಉಳಿದಂತೆ ಬಹುತೇಕ ಬಸ್ ಗಳು ಡಿಪೋಗಳಿಂದ ಹೊರ ಬಂದಿಲ್ಲ. ರಸ್ತೆಗಳು ಖಾಲಿ ಖಾಲಿಯಾಗಿದ್ದು, ಜನಸಂಚಾರ ವಾಹನಗಳ ಸಂಚಾರ ಇಲ್ಲದೇ ರಸ್ತೆಗಳು ಬಿಕೋ ಎನ್ನುತ್ತಿವೆ.