ಲಕ್ನೋ:ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ಉತ್ತರಪ್ರದೇಶ ಸರಕಾರ ವಾರಾಂತ್ಯದ ಲಾಕ್ ಡೌನ್ ಅವಧಿಯನ್ನು ಶುಕ್ರವಾರ(ಏ.30)ದಿಂದ ಮೇ 4ರವರೆಗೆ ವಿಸ್ತರಿಸಿ ಹೊಸ ಪ್ರಕಟಣೆ ಹೊರಡಿಸಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮೇ 1ರಿಂದಲೇ ಲಸಿಕೆ ನೀಡುವುದು ಅನುಮಾನ!
ರಾಜ್ಯದಲ್ಲಿ ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿರ್ಧಾರ ತೆಗೆದುಕೊಂಡಿದ್ದು, ಶುಕ್ರವಾರ ಸಂಜೆ 7ಗಂಟೆಯಿಂದ ಮಂಗಳವಾರ ಬೆಳಗ್ಗೆವರೆಗೆ ವಾರಾಂತ್ಯದ ಲಾಕ್ ಡೌನ್ ಜಾರಿಗೊಳಿಸಲಾಗಿದೆ ಎಂದು ಹೇಳಿದೆ.
ಉತ್ತರಪ್ರದೇಶದಲ್ಲಿ ಬುಧವಾರ(ಏ.28) ಒಂದೇ ದಿನ 266 ಮಂದಿ ಸಾವನ್ನಪ್ಪಿದ್ದು, 29,824 ಹೊಸ ಕೋವಿಡ್ ಪ್ರಕರಣ ವರದಿಯಾಗಿತ್ತು. ಇದರೊಂದಿಗೆ ಉತ್ತರಪ್ರದೇಶದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 11,82,848ಕ್ಕೆ ಏರಿಕೆಯಾಗಿದೆ.
ಕೋವಿಡ್ ನಿಂದ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11,943ಕ್ಕೆ ಹೆಚ್ಚಳವಾಗಿದೆ. ಕಳೆದ 24ಗಂಟೆಗಳಲ್ಲಿ ಒಟ್ಟು 35,903 ಮಂದಿ ಕೋವಿಡ್ ಸೋಂಕಿತರು ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿರುವುದಾಗಿ ವರದಿ ತಿಳಿಸಿದೆ.