Advertisement

ಖಾಸಗಿ ಆಸ್ಪತ್ರೆ ನೋಂದಣಿಗೆ ವಾರದ ಗಡುವು: ಡಿಸಿ

05:56 PM Jan 30, 2021 | Team Udayavani |

ಯಾದಗಿರಿ: ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಆನ್‌ ಲೈನ್‌ ನೋಂದಣಿ ಪ್ರಕ್ರಿಯೆ ಒಂದು ವಾರದೊಳಗೆ ಮುಗಿಸುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್‌. ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಸಕ್ಷಮ ಪ್ರಾಧಿಕಾರ ಮತ್ತು ಜಿಲ್ಲಾ ತಪಾಸಣಾ ಸಮಿತಿ ಹಾಗೂ ಸಲಹಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ಬಹಳಷ್ಟು ಫಲಾನುಭವಿಗಳಿಗೆ ಚಿಕಿತ್ಸೆ ಸೌಲಭ್ಯ ಎಲ್ಲ ಅರ್ಹ ಫಲಾನುಭವಿಗಳಿಗೆ ದೊರೆಯುವಂತಾಗಬೇಕು. ಆಯುಷ್ಮಾನ್‌ ಭಾರತ-ಆರೋಗ್ಯ ಕಾರ್ಡ್‌ಗಳನ್ನು ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳಿಗೆ ವಿತರಿಸಬೇಕು. ಎಲ್ಲ ಆಸ್ಪತ್ರೆ ಆಡಳಿತ ಅಧಿಕಾರಿಗಳು ಪ್ರತಿ ವಾರ ಯೋಜನೆ ಪ್ರಗತಿ ಪರಿಶೀಲಿಸಿ ವರದಿ ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಿಸಿಪಿಎನ್‌ಡಿಟಿ ಕಾಯ್ದೆ ಕುರಿತು 3 ಸರ್ಕಾರಿ, ಮತ್ತು 21 ಖಾಸಗಿ ಅಲ್ಟ್ರಾಸೌಂಡ್‌ ಕೇಂದ್ರಗಳ ಮಾಹಿತಿ ಪಡೆದು ಎಲ್ಲ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಲು ಸಹಾಯಕ ಆಯುಕ್ತರು ಸೇರಿದಂತೆ ಇತರ ಅಧಿ ಕಾರಿಗಳಿಗೆ ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿಗಳು ಜಿಲ್ಲೆಯಲ್ಲಿ ಯಾವುದೇ ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಿಲ್ಲ ಎಂದು ತಿಳಿಸಿದರು.

ಇ-ಆಸ್ಪತ್ರೆ ಮತ್ತು ಇ-ಸಂಜೀವಿನಿ ಕಾರ್ಯಕ್ರಮ ಪರಿಶೀಲಿಸಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಇ- ಸಂಜೀವಿನಿಯಲ್ಲಿ ಜಿಲ್ಲೆ 2ನೇ ಸ್ಥಾನದಲ್ಲಿರುವಂತೆ ಕಾರ್ಯನಿರ್ವಹಿಸಿದ ಅಧಿಕಾರಿಗಳ ಕಾರ್ಯ ಶ್ಲಾಘಿಸಿದರು. ಈ ವೇಳೆ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯಾಧಿ ಕಾರಿ ಡಾ| ಇಂದುಮತಿ ಪಾಟೀಲ್‌, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಸಂಜೀವಕುಮಾರ ರಾಯಚೂರಕರ್‌, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ಭಗವಂತ ಅನವಾರ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next