ಜಿನೇವಾ: ಪ್ರಸಕ್ತ ಸಾಲಿನ ವಿಶ್ವ ಆರ್ಥಿಕ ಶೃಂಗ ಸ್ವಿಜರ್ಲೆಂಡ್‌ನ ದಾವೋಸ್‌ನಲ್ಲಿ ಜ.17ರಿಂದ ಶುರುವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಮೊದಲ ದಿನದ ಕಾರ್ಯಕ್ರಮದಲ್ಲಿ ಆನ್‌ಲೈನ್ ಮೂಲಕ ಭಾಗವಹಿಸಿ, ಭಾಷಣ ಮಾಡಲಿದ್ದಾರೆ.
ಅವರೊಂದಿಗೆ ಜಗತ್ತಿನ ಇತರ ರಾಷ್ಟ್ರಗಳ ಸರ್ಕಾರಿ ಮುಖ್ಯಸ್ಥರೂ ಕೂಡ ವರ್ಚುವಲ್ ಆಗಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚುತ್ತಿರುವ ಕೊರೊನಾ ಹಿನ್ನೆಲೆಯಲ್ಲಿ ಸ್ವಿಜರ್ಲೆಂಡ್‌ನ ಸ್ವಿಸ್ ಸ್ಕಿ ರೆಸಾರ್ಟ್‌ನಲ್ಲಿ ನಡೆಯಬೇಕಾಗಿದ್ದ ಭೌತಿಕ ಸಮ್ಮೇಳನವನ್ನು ಮುಂದೂಡಲು ನಿರ್ಧರಿಸಲಾಗಿದೆ.
ಇದನ್ನೂ ಓದಿ:ಭಾರತಕ್ಕೆ ತೆರಳುವ 2 ವಿಮಾನಗಳು ಒಂದೇ ರನ್‌ವೇಯಲ್ಲಿ: ದುಬೈನಲ್ಲಿ ತಪ್ಪಿದ ದುರಂತ
ಹೀಗಾಗಿ, ಆನ್‌ಲೈನ್ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಸತತ ಎರಡನೇ ವರ್ಷ ಶೃಂಗವನ್ನು ಆನ್‌ಲೈನ್ ಮೂಲಕ ನಡೆಸಲಾಗುತ್ತಿದೆ.