Advertisement

Weightlifting: ಆಳ್ವಾಸ್‌ ಕಾಲೇಜಿಗೆ ಸಮಗ್ರ ಪ್ರಶಸ್ತಿ

12:31 AM Mar 25, 2024 | Team Udayavani |

ಮೂಡುಬಿದಿರೆ: ಮಂಗಳೂರು ವಿ.ವಿ. ಅಂತರ್‌ ಕಾಲೇಜು ವೇಟ್‌ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್‌ ಕಾಲೇಜು ಸಮಗ್ರ ತಂಡ ಪ್ರಶಸ್ತಿ ಜಯಿಸಿದೆ.

Advertisement

ಮಂಗಳೂರಿನ ಎಸ್‌ಡಿಎಂ ಬಿಬಿಎಂ ಕಾಲೇಜಿನಲ್ಲಿ ನಡೆದ ಸ್ಪರ್ಧೆಯಲ್ಲಿ ಆಳ್ವಾಸ್‌ ಪುರುಷರ ಮತ್ತು ಮಹಿಳೆಯರ ತಂಡಗಳು ಟ್ರೋಫಿ ಗೆಲ್ಲುವ ಮೂಲಕ ಸಮಗ್ರ ತಂಡ ಪ್ರಶಸ್ತಿಗೆ ಪಾತ್ರವಾಗಿದೆ.

ಪುರುಷರ ವಿಭಾಗದಲ್ಲಿ ಆಳ್ವಾಸ್‌ ಕಾಲೇಜು 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚಿನ ಪದಕಗಳ ಸಹಿತ 61 ಅಂಕ ಗಳಿಸಿ, ಪ್ರೊ. ರಿಚರ್ಡ್‌ ರೆಬೆಲ್ಲೊ ರೋಲಿಂಗ್‌ ಟ್ರೋಫಿ ಪಡೆಯಿತು. ಎಸ್‌ಡಿಎಂ ಕಾಲೇಜು ದ್ವಿತೀಯ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ತೃತೀಯ ಸ್ಥಾನ ಪಡೆದವು.

ಮಹಿಳಾ ವಿಭಾಗದಲ್ಲಿ ಆಳ್ವಾಸ್‌ ಸತತ 20ನೇ ಬಾರಿ ತಂಡ ಪ್ರಶಸ್ತಿ ಜಯಿಸಿತು. 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚಿನ ಪದಕಗಳೊಂದಿಗೆ ಶಿರ್ವ ಬ್ಲೊಸಮ್‌ ಮನ್ವಿನ್‌ ಸೆಲೆಸ್ಟಿನ್‌ ಡಿ’ಸೋಜ ಟ್ರೋಫಿ ಗೆದ್ದಿತು. ಉಜಿರೆ ಎಸ್‌ಡಿಎಂ ಕಾಲೇಜು ದ್ವಿತೀಯ ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜು ತೃತೀಯ ಸ್ಥಾನ ಪಡೆದಿವೆ.

ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next