ಬೆಂಗಳೂರು: ಅಯೋಧ್ಯೆಯಲ್ಲಿ ಐತಿಹಾಸಿಕ ಬಾಲರಾಮ ಪ್ರತಿಷ್ಠಾಪನೆ ಕಾರ್ಯ ಹಾಗೂ ಮಂಡಲೋತ್ಸವಗಳನ್ನು ವೈಭವದಿಂದ ನೆರವೇರಿಸಿ ರಾಜಧಾನಿ ಬೆಂಗಳೂರಿಗೆ ಆಗಮಿಸಿದ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳಿಗೆ ಗುರುವಾರ ಭವ್ಯ ಸ್ವಾಗತ ನೀಡಲಾಯಿತು.
ಪಿಐಎಸ್ ಕಾಲೇಜಿನ ಹಿಂಭಾಗದ ನೈಸ್ ಟೋಲ್ ಬಳಿಯಿಂದ ಬೈಕ್ ರ್ಯಾಲಿ ನಡೆಸಲಾಯಿತು. ಬಸವನಗುಡಿಯ ದೊಡ್ಡ
ಗಣಪತಿ ದೇವಸ್ಥಾನದಿಂದ ಶೋಭಾಯಾತ್ರೆ ನಡೆಯಿತು. ಬಳಿಕ ಪೂರ್ಣಪ್ರಜ್ಞಾ ವಿದ್ಯಾಪೀಠದಲ್ಲಿ ಅಭಿವಂದನಾ ಸಮಾರಂಭ ಜರುಗಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶ್ರೀ ವಿಶ್ವಪ್ರಸನ್ನ ತೀರ್ಥರ ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ, ಬೇಲಿ ಮಠದ ಚರಮೂರ್ತಿ ಶಿವರುದ್ರ ಸ್ವಾಮೀಜಿ, ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲ ಡಾ| ಎಚ್. ಸತ್ಯನಾರಾಯಣ, ಸಂಸದ ತೇಜಸ್ವಿ ಸೂರ್ಯ, ಶಾಸಕರ ರವಿಸುಬ್ರಹ್ಮಣ್ಯ, ಸಿ.ಕೆ. ರಾಮಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ರಾಮ ಮಂದಿರ ವಿಷಯ ಬಳಸಿದರೆ ತಪ್ಪಿಲ್ಲ
ದಾವಣಗೆರೆ: ರಾಮಮಂದಿರ ವಿಷಯವನ್ನು ಬಿಜೆಪಿಯವರು ಬಳಸಿಕೊಳ್ಳುವುದು ತಪ್ಪಲ್ಲ. ಬಿಜೆಪಿಯವರು ಕೆಲಸ ಮಾಡಿದ್ದಾರೆ. ಹಾಗಾಗಿ ಅದನ್ನು ಹೇಳಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಿದಂತೆ ರಾಜ್ಯದಲ್ಲಿ
ಆನೆಗೊಂದಿಯ ಹನುಮ ಪುಣ್ಯಕ್ಷೇತ್ರ ಅಭಿವೃದ್ಧಿ ಆಗಬೇಕು. ಅದಕ್ಕೊಂದು ಟ್ರಸ್ಟ್ ಮಾಡಬೇಕು. ಸರಕಾರ ದೇವಸ್ಥಾನದ
ಪ್ರಸಾದವನ್ನು ತಯಾರಿಸಲು ಮಾರ್ಗಸೂಚಿ ಬಿಡುಗಡೆ ಮಾಡಬೇಕು ಎಂದರು.