Advertisement
ಶನಿವಾರ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಶಾಸಕ ಗೋಪಾಲಯ್ಯ ನಮ್ಮ ವಿರುದ್ಧ ಹೇಳಿಕೆ ನೀಡಿ ಬಾಂಬೆಗೆ ಹೋಗಿದ್ದಾರೆ. ಬಂಡಾಯ ಶಾಸಕರ ಬಗ್ಗೆ ಸ್ಪೀಕರ್ ಒಂದು ವಾರದೊಳಗೆ ತೀರ್ಮಾನ ಕೈಗೊಳ್ಳುತ್ತಾರೆ. ಚುನಾವಣೆ ಇರುತ್ತೋ, ಇಲ್ಲವೋ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ನುಡಿದರು.
Related Articles
Advertisement
ತಾನು ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪನವರ ಹೇಳಿಕೆಯನ್ನು ಸ್ವಾಗತಿಸುವುದಾಗಿ ದೇವೇಗೌಡರು ಈ ಸಂದರ್ಭದಲ್ಲಿ ಹೇಳಿದರು. ಬಿಜೆಪಿಗೆ ವಿಷಯಾಧಾರಿತವಾಗಿ ಬೆಂಬಲ ನೀಡುತ್ತೇವೆ. ಎಲ್ಲವನ್ನೂ ತಿರಸ್ಕರಿಸಲು ಸಾಧ್ಯವಿಲ್ಲ. ಧನವಿನಿಯೋಗ ವಿಧೇಯಕಕ್ಕೆ ಎಲ್ಲರೂ ಒಪ್ಪಿದರೆ ನಾವೂ ಸಹಕಾರ ನೀಡುತ್ತೇವೆ ಎಂದರು.
ನಾವು ಪರಿಣಾಮಕಾರಿಯಾಗಿ ವಿರೋಧ ಪಕ್ಷದಲ್ಲಿ ಕೆಲಸ ಮಾಡಲು ಪಕ್ಷದ ಶಾಸಕರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಆಗಸ್ಟ್ 7ರಂದು ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ ಮಾಡುತ್ತೇನೆ, 30 ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಕುಮಾರಸ್ವಾಮಿಗೆ 20% ಮತ ಕೊಟ್ಟಿರುವ ಮತದಾರರು ಇದ್ದಾರೆ ಎಂದು ತಿಳಿಸಿದರು.
ಜಿಟಿ ದೇವೇಗೌಡರ ಹೇಳಿಕೆ ವಿಚಾರ:
ನಾವು ರಚನಾತ್ಮಕವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದೇನೆ. ಫೈನಾನ್ಸ್ ಬಿಲ್ ಪಾಸ್ ಮಾಡಲಿ, ಕುಮಾರಸ್ವಾಮಿ ಮಂಡಿಸಿದ ಬಜೆಟ್ ಅದು. ಹೀಗಾಗಿ ಜಿಟಿ ದೇವೇಗೌಡರು ಹೇಳಿದ ವಿಚಾರ ದೊಡ್ಡ ವಿಷಯವೇ ಅಲ್ಲ ಎಂದು ಹೇಳಿದರು.