ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಯವಿಟ್ಟು ಉತ್ತರಿಸಿ ಎಂದು ಸರಣಿ ಟ್ವೀಟ್ ಮೂಲಕ ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಗಣಿ ಧಣಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿಮ್ಮ ಜೊತೆ ಪ್ರಚಾರದಲ್ಲಿ ಪಾಲ್ಗೊಳ್ಳು ತ್ತಾರೆಯೇ ? 15 ರಿಂದ 20 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ದಿಂದ ಅವರ ಸಂಬಂಧಿಕರು ಮತ್ತು 8 ಜನ ಆಪ್ತರಿಗೆ ಟಿಕೆಟ್ ಕೊಟ್ಟಿದ್ದೀರಿ. ನೀವು ಭ್ರಷ್ಟಾಚಾರದ ಬಗ್ಗೆ ಹೇಗೆ ಮಾತನಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಬಿಜೆಪಿ ರಾಜ್ಯಧ್ಯಕ್ಷ ಯಡಿಯೂರಪ್ಪ ಅವರನ್ನು ನಿಮ್ಮ ಪಕ್ಷದ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೀರಿ, ಅವರು ಈಗಲೂ ಸಿಎಂ ಅಭ್ಯರ್ಥಿ ಯಾಗಿ ದ್ದಾರಾ? ಈ ಬಗ್ಗೆ ಕರ್ನಾಟಕದ ಜನತೆ ತಿಳಿಯಲು ಬಯಸುತ್ತಿದಾರೆ.
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತೀರಿ, 2.71 ಲಕ್ಷ ಕೋಟಿ ರೂ. ಸಾಲ ಮಾಡಿರುವ ಕಾರ್ಪೊರೇಟ್ ಕಂಪನಿಗಳ ಸಾಲ ಮನ್ನಾ ಮಾಡುತ್ತೀರಿ, ಆದರೆ, ರೈತರ ಸಾಲ ಮನ್ನಾ ಮಾಡುವುದಿಲ್ಲ ಎಂದು ಹೇಳುತ್ತೀರಿ, ರೈತರ ಬಗ್ಗೆ ನಿಮ್ಮ ನಿಲುವೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯನವರೇ, ನೀವು ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸ ದಿದ್ದರೆ ಈವರೆಗೆ ನಿಮ್ಮ ಸರ್ಕಾರದ ಭ್ರಷ್ಟಾಚಾರ ಸಂಬಂಧ 1000ಕ್ಕೂ ಹೆಚ್ಚು ಪ್ರಕರಣ ದಾಖಲಾಗುತ್ತಿತ್ತು. ನೀವು ಕೇಳಿರುವ ಪ್ರಶ್ನೆಗಳನ್ನು ನೀವು ಕಾಂಗ್ರೆಸ್ ಸೇರುವ ಮುನ್ನ ಹಿಂದಿನ ಯುಪಿಎ ಸರ್ಕಾರವನ್ನು ಕೇಳಿದ್ದರೆ ಜನ ಅಭಿನಂದನೆ ಸಲ್ಲಿಸುತ್ತಿದ್ದರು.
– ಡಿ.ವಿ.ಸದಾನಂದಗೌಡ,
ಕೇಂದ್ರ ಸಚಿವ