Advertisement

ರಾಜಧಾನಿ ಎಕ್ಸ್‌ಪ್ರೆಸ್‌ಗೆ ಬಿಜೆಪಿಯಿಂದ ಸ್ವಾಗತ

01:00 AM Feb 20, 2019 | Team Udayavani |

ಕಾಸರಗೋಡು: ಹಲವು ವರ್ಷಗಳಿಂದ ಜನರು ಎದುರು ನೋಡುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಗಾಡಿಗೆ ಕಾಸರಗೋಡು ರೈಲು ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ನೀಡಿದರು.

Advertisement

ಕಾಸರಗೋಡು  
ರೈಲು ನಿಲ್ದಾಣದಲ್ಲಿ ರಾಜಧಾನಿ ಎಕ್ಸ್‌ಪ್ರೆಸ್‌ಗೆ ನಿಲುಗಡೆ  ಮಂಜೂರು ಮಾಡಿದ ರೈಲ್ವೇ ಸಚಿವ ಪೀಯೂಷ್‌ ಗೋಯಲ್‌, ರೈಲ್ವೇ ಸಚಿವಾಲಯಕ್ಕೆ ಅಭಿನಂದನೆ ಸಲ್ಲಿಸಿದೆ. ಬಿಜೆಪಿ ಕಾರ್ಯಕರ್ತರು ಕಾಸರಗೋಡು ರೈಲು ನಿಲ್ದಾಣದಲ್ಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲುಗಾಡಿಗೆ ಸ್ವಾಗತ ನೀಡಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್‌, ಕಾಸರಗೋಡು ಮಂಡಲ ಅಧ್ಯಕ್ಷ ಸುಧಾಮ ಗೋಸಾಡ, ಉದುಮ ಮಂಡಲ ಪ್ರಧಾನ ಕಾರ್ಯದರ್ಶಿ ಎನ್‌.ಬಾಬುರಾಜ್‌, ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ರಾಜೇಶ್‌ ಕೈಂದಾರ್‌, ಬಿಜೆಪಿ ನೇತಾರರಾದ ಗುರುಪ್ರಸಾದ್‌, ಹರೀಶ್‌ ಗೋಸಾಡ, ಉಮಾ ಮೊದಲಾದವರು ನೇತೃತ್ವ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next