Advertisement

ಕೇಂದ್ರ ವಿತ್ತ ಸಚಿವರಿಗೆ ಪ್ರತಿಭಟನೆಯ ಸ್ವಾಗತ

11:09 PM Oct 05, 2019 | Lakshmi GovindaRaju |

ಹುಬ್ಬಳ್ಳಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಪ್ರತಿಭಟನೆಯ ಸ್ವಾಗತ ದೊರೆಯಿತು. ಕೇಂದ್ರ ಸರಕಾರ ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರು ವಿಮಾನ ನಿಲ್ದಾಣ ಮುಂಭಾಗ ಪ್ರತಿಭಟನೆ ನಡೆಸಿ, ಘೇರಾವ್‌ ಹಾಕಲು ಯತ್ನಿಸಿದರು. ಕೇಂದ್ರ ಸರಕಾರ, ಪ್ರಧಾನಿ ಹಾಗೂ ಹಣಕಾಸು ಸಚಿವರ ವಿರುದ್ಧ ಘೋಷಣೆ ಕೂಗಿದರು.

Advertisement

ಪೊಲೀಸರು ಅವರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು. ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ಕೇಂದ್ರ ಸರಕಾರ ವಿಳಂಬ ಮಾಡುತ್ತಿದೆ. 1,200 ಕೋಟಿ ರೂ.ಮಧ್ಯಂತರ ಪರಿಹಾರ ಕಡಿಮೆಯಾಗಿದ್ದು, ನೆರೆ ಸಂತ್ರಸ್ತರ ಜೀವನ ರೂಪಿಸುವಲ್ಲಿ ಉದ್ದೇಶಪೂರ್ವಕವಾಗಿ ಕೇಂದ್ರ ನಿರ್ಲಕ್ಷé ಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ನೆರೆ ಸಂತ್ರಸ್ತರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಸ್ವತ: ವೈಮಾನಿಕ ಸಮೀಕ್ಷೆ ನಡೆಸಿ, ಇಲ್ಲಿನ ಗಂಭೀರತೆಯನ್ನು ಕಣ್ಣಾರೆ ಕಂಡಿದ್ದರೂ ಹೆಚ್ಚು ಪರಿಹಾರ ನೀಡುವಲ್ಲಿ ವಿಫ‌ಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next