Advertisement
*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಅಡಿ 26,930 ಕೋಟಿ ರೂ. ಅನುದಾನ ನಿಗದಿ. ಇದು ನಿಯಮಾನುಸಾರ ಹಂಚಿಕೆ ಮಾಡಬೇಕಾದ ಮೊತ್ತಕ್ಕಿಂತ ಹೆಚ್ಚು.
*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ನೀಡುವ ಷೇರು ಬಂಡವಾಳ ದ್ವಿಗುಣಗೊಳಿಸಿ 20 ಲಕ್ಷ ರೂ. ಗಳಿಗೆ ಹೆಚ್ಚಳ.
*ಪ್ರತಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ, ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಒಂದು ಲಕ್ಷ ರೂ. ನಗದು ಪ್ರಶಸ್ತಿ ನೀಡಲು ಕ್ರಮ. 60 ಲಕ್ಷ ರೂ. ಅನುದಾನ.
*ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಎರಡು ಕೋಟಿ ರೂ. ಅನುದಾನ.
*ಚರ್ಮ ಶಿಲ್ಪ”ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆಗೆ 250 ಚರ್ಮ ಕುಶಲಕರ್ಮಿಗಳಿಗೆ ಡಾ|| ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಘಟಕ ವೆಚ್ಚ 10 ಲಕ್ಷ ರೂ.ಗಳಲ್ಲಿ ಐದು ಲಕ್ಷ ರೂ. ಸಹಾಯಧನ. 12.50 ಕೋಟಿ ರೂ. ಅನುದಾನ.
*ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ. ಅನುದಾನ.
*ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಗಮಗಳಿಗೆ 125 ಕೋಟಿ ರೂ. ಅನುದಾನ.
*ಇ-ವಾಣಿಜ್ಯ ಉತ್ಪನ್ನಗಳನ್ನು ಸರಬರಾಜು ಮಾಡುವ ಯುವಕರಿಗೆ ಬೈಕ್ ಕೊಳ್ಳಲು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾವಿರ ಯುವಕರಿಗೆ ತಲಾ 25,000 ರೂ.ಗಳಂತೆ 2.5 ಕೋಟಿ ರೂ. ಆರ್ಥಿಕ ನೆರವು
*ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ
*ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲು ಕ್ರಮ.
*ಕ್ರೈಸ್ತ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ.
*ಅಪೂರ್ಣ ಹಂತದ ಎರಡು ಲಕ್ಷ ಮನೆಗಳನ್ನು ಪೂರ್ಣಗೊಳಿಸಿ, ವಸತಿ ರಹಿತರಿಗೆ ಹಂಚಿಕೆ ಮಾಡಲು 2500 ಕೋಟಿ ರೂ.
*ಸರ್ಕಾರದ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಿಕೊಂಡು ಹತ್ತು ವರ್ಷವಾಗಿದ್ದಲ್ಲಿ, ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಅಡಮಾನವಿಡಲಾದ ನಿವೇಶನವನ್ನು ಡೀಮ್ಡ್ ರಿಲೀಸ್ ಎಂದು ಪರಿಗಣಿಸಲು ಕ್ರಮ.
*ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.
*ನಬಾರ್ಡ್ ಸಹಯೋಗದಲ್ಲಿ 758 ಕೋಟಿ ರೂ. ವೆಚ್ಚದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ.
*ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯ ತಲಾ ಮೂರು ಶಾಲೆಗಳ ದತ್ತು ಸ್ವೀಕಾರ ಮತ್ತು ಅಭಿವೃದ್ಧಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ರಮ.
*ಪ್ರತಿ ತಿಂಗಳಲ್ಲಿ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನ, “ಸಂಭ್ರಮ ಶನಿವಾರ” ಆಚರಣೆ.
*ದಾವಣಗೆರೆ, ಉಡುಪಿ ಮತ್ತು ದೊಡ್ಡಬಳ್ಳಾಪುರದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ. ಅನುದಾನ
*ಶಿಕ್ಷಕರ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು “ಶಿಕ್ಷಕ ಮಿತ್ರ” ಎಂಬ ಮೊಬೈಲ್ ಆ್ಯಪ್ ಅಭಿವೃದ್ಧಿ.
*400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಒಂದು ಕೋಟಿ ರೂ. ಅನುದಾನ.
*ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐ.ಐ.ಟಿ. ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು 10 ಕೋಟಿ ರೂ. ಅನುದಾನ.
*ತಂತ್ರಜ್ಞಾನದ ನೆರವಿನಿಂದ ರಾಜ್ಯದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯ ಸಮರ್ಥ ನಿರ್ವಹಣೆಗೆ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಶಾಶ್ವತ ವ್ಯವಸ್ಥೆ.
*ಇಂಟರ್ಯಾಕ್ಟೀವ್ ಆನ್-ಲೈನ್ ಕೋರ್ಸ್‍ಗಳನ್ನು (M.O.O.C) ಪ್ರಾರಂಭ ಹಾಗೂ ಗುಣಾತ್ಮಕ ಇ-ಕಂಟೆಂಟ್ ಅಭಿವೃದ್ಧಿಗೆ ಒಂದು ಕೋಟಿ ರೂ. ವೆಚ್ಚ
*ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ತಲಾ ಐದು ಕೋಟಿ ರೂ. ವೆಚ್ಚದಲ್ಲಿ ಜಿಯೋಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ.
*ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ ಆಯೋಜನೆ.
*ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ / ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಂತ ಹಂತವಾಗಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆ ವಿಸ್ತರಣೆ.
*ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ 200 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.
*ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆಗೆ 28 ಕೋಟಿ ರೂ. ಅನುದಾನ.
*ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ ತಾಲ್ಲೂಕು ಆಸ್ಪತ್ರೆಗಳ ತೀವ್ರ ನಿಗಾ ಘಟಕ ನಿರ್ವಹಣೆ.
*ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ.
*ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ ವಿಭಾಗಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಿ ಉತ್ಕ್ರಷ್ಟತಾ ಕೇಂದ್ರಗಳನ್ನಾಗಿ (Center of Excellence) ಅಭಿವೃದ್ಧಿಪಡಿಸಲು ಐದು ಕೋಟಿ ರೂ. ಅನುದಾನ.
*ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಸಿ.ವಿ. ರಾಮನ್ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಕ್ಯಾತ್‍ಲ್ಯಾಬ್ ಸ್ಥಾಪನೆ.
*ಹಾವೇರಿ ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 20 ಹಾಸಿಗೆಗಳ ಆಯುಷ್ ಸಂಯುಕ್ತ ಆಸ್ಪತ್ರೆ ಪ್ರಾರಂಭ. ಐದು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
*ರಾಜ್ಯದ 17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ (Neonatal Intensive Care Unit) ಹಂತ ಹಂತವಾಗಿ ಉನ್ನತೀಕರಣ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ.
*ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ಮೂರು ಕೋಟಿ ರೂ. ವೆಚ್ಚದಲ್ಲಿ ಸಿಮ್ಯುಲೇಷನ್ ಲ್ಯಾಬ್ ಮತ್ತು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್ ಸ್ಥಾಪನೆ.
*ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್ ಸಂಸ್ಥೆಗಳ ಸ್ಥಾಪನೆ.
*ವೈದ್ಯಕೀಯ, ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು ಕೇಂದ್ರೀಕೃತ ಉದ್ಯೋಗ ಕೋಶ ಸ್ಥಾಪನೆ.
*ಆಯವ್ಯಯದಲ್ಲಿ ಮಹಿಳೆಯರ ಕಲ್ಯಾಣಕ್ಕಾಗಿ 37,783 ಕೋಟಿ ರೂ.ಗಳ 953 ಕಾರ್ಯಕ್ರಮಗಳ ನಿಗದಿ. ಇದು ಒಟ್ಟಾರೆ ಆಯವ್ಯಯ ಗಾತ್ರದ ಶೇ.15.88 ರಷ್ಟು.
*ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಮಕ್ಕಳ ಆಯವ್ಯಯ ಮಂಡನೆ. ರಾಜ್ಯದಲ್ಲಿರುವ 18 ವರ್ಷದ ಕೆಳಗಿರುವ ಎಲ್ಲಾ ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆ ಅಡಕ. 2020-21ನೇ ಸಾಲಿನ ಆಯವ್ಯಯದಲ್ಲಿ 36,340 ಕೋಟಿ ರೂ.ಗಳ 279 ಕಾರ್ಯಕ್ರಮಗಳ ಪ್ರಸ್ತಾಪ. ಇದು ಒಟ್ಟಾರೆ ಆಯವ್ಯಯ ಗಾತ್ರದ 15.28 ರಷ್ಟು.
*ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ರಾಜ್ಯದಲ್ಲಿ ಏಳು ಹೊಸ ಬಾಲಮಂದಿರಗಳ ಸ್ಥಾಪನೆ. 5.67 ಕೋಟಿ ರೂ. ಅನುದಾನ.
*ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿಯಲ್ಲಿ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಸುಧಾರಣಾ ಸಂಸ್ಥೆಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್. ಐದು ಕೋಟಿ ರೂ. ಅನುದಾನ.
*ನೆರೆಹಾವಳಿಯಿಂದ ಹಾನಿಯಾದ 842 ಅಂಗನವಾಡಿ ಕೇಂದ್ರಗಳ ಪುನರ್ ನಿರ್ಮಾಣಕ್ಕೆ 138 ಕೋಟಿ ರೂ.
*ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಕಾರ್ಯಕ್ರಮಗಳನ್ನು ಪಾರದರ್ಶಕವಾಗಿ ಮಹಿಳೆಯರಿಗೆ ತಲುಪಿಸಲು ಮಹಿಳಾ ಸುರಕ್ಷತಾ ಪೋರ್ಟಲ್ ಪ್ರಾರಂಭ.
*ಬಾಲಮಂದಿರದಿಂದ 21 ವರ್ಷ ತುಂಬಿದ ನಂತರ ಬಿಡುಗಡೆ ಹೊಂದುವವರಿಗೆ ಜೀವನೋಪಾಯ ರೂಪಿಸಿಕೊಳ್ಳಲು “ಉಪಕಾರ” ಯೋಜನೆಯಡಿ ಮೂರು ವರ್ಷ ಅವಧಿಗೆ ಮಾಸಿಕ 5000 ರೂ. ಆರ್ಥಿಕ ನೆರವು; ಕೌಶಲ್ಯಾಭಿವೃದ್ಧಿ ತರಬೇತಿಗೆ ಕ್ರಮ. ಒಂದು ಕೋಟಿ ರೂ. ಅನುದಾನ.
*ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಮಹಿಳಾ ಪೂರಕ ಪೌಷ್ಟಿಕ ಉತ್ಪಾದನಾ ಕೇಂದ್ರಗಳ ಆಧುನೀಕರಣಕ್ಕೆ ಮಹಿಳಾ ಅಭಿವೃದ್ಧಿ ನಿಗಮದಿಂದ 20 ಲಕ್ಷ ರೂ. ವರೆಗೆ ಬಡ್ಡಿ ರಹಿತ ಕಿರು ಸಾಲ ಸೌಲಭ್ಯ. 20 ಕೋಟಿ ರೂ. ಅನುದಾನ.
*ಸ್ತ್ರೀಶಕ್ತಿ ಸ್ವ-ಸಹಾಯ ಸಂಘದ ಉತ್ಪನ್ನಗಳನ್ನು ಸರ್ಕಾರದ ಇಲಾಖೆಗಳಲ್ಲಿ ಅವಶ್ಯಕತೆಗನುಸಾರ ಖರೀದಿಸಲು ಕ್ರಮ.
*ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಟ್ರಾನ್ಸ್ ಜೆಂಡರ್ ರ ಮೂಲಹಂತದ ಸಮೀಕ್ಷೆ ಕೈಗೊಳ್ಳಲು 70 ಲಕ್ಷ ರೂ. ಅನುದಾನ.
*ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಿಸಲು 60 ಲಕ್ಷ ರೂ. ಅನುದಾನ
*ದೃಷ್ಟಿದೋಷವುಳ್ಳ ವ್ಯಕ್ತಿಗಳಿಗಾಗಿ ಬೆಂಗಳೂರಿನಲ್ಲಿ ಹಾಗೂ ಕಲಬುರಗಿಯಲ್ಲಿ 30 ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರೈಲ್ ಕಂ ಟಾಕಿಂಗ್ ಲೈಬ್ರರಿ ಸ್ಥಾಪನೆ. ಮೈಸೂರಿನ ಸರ್ಕಾರಿ ಬ್ರೈಲ್ ಮುದ್ರಣಾಲಯಕ್ಕೆ 80 ಲಕ್ಷ ರೂ.ಗಳ ವೆಚ್ಚದಲ್ಲಿ ಆಧುನಿಕ ಮುದ್ರಣ ಯಂತ್ರ ಖರೀದಿ.
*ರಾಜ್ಯದ 500 ಅಂಧ ವಿದ್ಯಾರ್ಥಿಗಳಿಗೆ ತಲಾ 25,000 ರೂ.ಗಳ ಮೊತ್ತದ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್ ಹಾಗೂ ವಾಕಿಂಗ್ ಸ್ಟಿಕ್‍ಗಳನ್ನೊಳಗೊಂಡ ಕಿಟ್ ವಿತರಣೆ. 1.25 ಕೋಟಿ ರೂ. ಅನುದಾನ.
*ಅಂಧ ತಾಯಂದಿರಿಗೆ ನೀಡುವ ಮಾಸಿಕ 2000 ರೂ. ಶಿಶುಪಾಲನಾ ಭತ್ಯೆ ಯೋಜನೆ ಮಗುವಿನ ಮೊದಲ ಎರಡು ವರ್ಷಗಳಿಂದ ಐದು ವರ್ಷದ ವರೆಗೆ ವಿಸ್ತರಣೆ.
* ಮುಖ್ಯಮಂತ್ರಿಗಳ ಆರೋಗ್ಯ ಸುರಕ್ಷಾ” ಯೋಜನೆಯಡಿಯಲ್ಲಿ ಒಂದು ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ಅನುಮೋದಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು “ಉಚಿತ ಪ್ರಿಪೇಯ್ಡ್ ಹೆಲ್ತ್ ಕಾರ್ಡ್” ವಿತರಣೆ.
*”ವನಿತಾ ಸಂಗಾತಿ” ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ. ಅನುದಾನ.
*ನಗರ ಪ್ರದೇಶಗಳಲ್ಲಿ ದುಡಿಯುತ್ತಿರುವ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರ ಆರೋಗ್ಯ ರಕ್ಷಣೆಗೆ 10 “ಮೊಬೈಲ್ ಕ್ಲಿನಿಕ್” ಪ್ರಾರಂಭ.
*ಕಟ್ಟಡ ಕಾರ್ಮಿಕರ ಮಕ್ಕಳ ಪಾಲನೆಗೆ ಕಟ್ಟಡ ನಿರ್ಮಾಣ ಸ್ಥಳದಲ್ಲಿ 10 ಸಂಚಾರಿ ಶಿಶುಪಾಲನಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 110 “ಕಿತ್ತೂರು ರಾಣಿ ಚೆನ್ನಮ್ಮ” ಶಿಶು ಪಾಲನಾ ಕೇಂದ್ರಗಳ ಸ್ಥಾಪನೆ.
*“ಆಹಾರ” ತಂತ್ರಾಂಶ ಉನ್ನತೀಕರಿಸಲು ಕ್ರಮ.
*ಕಾನೂನು ಮಾಪನ ಶಾಸ್ತ್ರ ಇಲಾಖೆಯ ಚಟುವಟಿಕೆಗಳ ಮೇಲ್ವಿಚಾರಣೆ ಮತ್ತು ಉಸ್ತುವಾರಿ ಬಿಗಿಗೊಳಿಸಲು “ಇ-ಮಾಪನ” ತಂತ್ರಾಂಶ ಉನ್ನತೀಕರಣ.
* 2020-21ನೇ ಸಾಲಿನಲ್ಲಿ ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ ನಿಗದಿ ಪಡಿಸಿದ ಒಟ್ಟು ಅನುದಾನ 72,093 ಕೋಟಿ ರೂ.