Advertisement

ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಪಡಿಸಿ: ಡಾ|ಅಪ್ಪ

06:29 PM Apr 07, 2021 | Team Udayavani |

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಪ್ರವಾಸೋದ್ಯಮ ಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಪರಿಣಾಮಕಾರಿ ನಿಟ್ಟಿನಲ್ಲಿ ಅಭಿವೃದ್ಧಿಪಡಿಸುವ ಮೂಲಕ ಈ ಪ್ರದೇಶದ ಶ್ರೀಮಂತ ಪ್ರವಾಸೋದ್ಯಮವನ್ನು ಎತ್ತರಕ್ಕೆ ಬೆಳೆಸಬೇಕೆಂದು ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾ ಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದರು.

Advertisement

18ನೇ ಶತಮಾನದ ಸಂತ ಶ್ರೀ ಶರಣಬಸವೇಶ್ವರ ಕತೃì ಗದ್ದುಗೆ ದರ್ಶನ ಪಡೆಯಲು ಮಂಗಳವಾರ ಆಗಮಿಸಿದ್ದ, ಪ್ರವಾಸೋದ್ಯಮ, ಪರಿಸರ ವಿಜ್ಞಾನ ಮತ್ತು ಪರಿಸರ ಸಚಿವ ಸಿ.ಪಿ. ಯೋಗೇಶ್ವರ ಅವರಿಗೆ ಜ್ಞಾಪಕ ಪತ್ರ ಸಲ್ಲಿಸಿದರು. ಕಲಬುರಗಿ, ಬೀದರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಸೇರಿದಂತೆ ಈ ಪ್ರದೇಶದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರವಾಸೋದ್ಯಮ ಸಾಮರ್ಥ್ಯ ಮತ್ತು ಶ್ರೀಮಂತ ಐತಿಹಾಸಿಕ ಸ್ಮಾರಕಗಳಿವೆ. ಆದರೆ ಸರ್ಕಾರಗಳ ಅಸಕರಾತ್ಮಕ ಮನೋಭಾವದಿಂದಾಗಿ ಈ ಭಾಗದ ಉತ್ಕೃಷ್ಟ ಪ್ರವಾಸೋದ್ಯಮ ಯಾವುದೇ ರೀತಿಯಲ್ಲಿ ಬಳಕೆಯಾಗದೆ ಉಳಿದಿದೆ ಎಂದರು.

ಮುಖ್ಯವಾಗಿ 18 ನೇ ಶತಮಾನದ ಶರಣಬಸವೇಶ್ವರ ದೇಗುಲ ರಾಜ್ಯದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ರಾಜ್ಯ ಮತ್ತು ರಾಷ್ಟ್ರದ ದೂರದ ಪ್ರದೇಶಗಳಿಂದ ಭಕ್ತರು ದೇಗುಲಕ್ಕೆ ಆಗಮಿಸಿ ದರ್ಶನ ಪಡೆಯುತ್ತಾರೆ. ಶರಣಬಸವೇಶ್ವರರು ಮಾನವಕುಲಕ್ಕೆ ನಿಸ್ವಾರ್ಥ ಸೇವೆ ಮತ್ತು “ದಾಸೋಹ’ ತತ್ವಶಾಸ್ತ್ರಕ್ಕೆ ಹೊಸ ನಿರ್ದೇಶನ ನೀಡಿದವರು.

ದೇವಸ್ಥಾನಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ನಾಗರಿಕ ಸೌಲಭ್ಯಗಳು ಮತ್ತು ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುವುದು ಸೇರಿದಂತೆ ಹೆಚ್ಚಿನ ಸೌಲಭ್ಯಗಳು ಈ ದೇವಾಲಯಕ್ಕೆ ಅಗತ್ಯವಿದೆ ಎಂದು ಹೇಳಿದರು. ಪ್ರತಿವರ್ಷ ಲಕ್ಷಾಂತರ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. 2017-18 ಮತ್ತು 2018-19ರ ಅವ ಧಿಯಲ್ಲಿ 20 ಲಕ್ಷ ಮತ್ತು 24 ಲಕ್ಷ ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಒಂದು ಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸುವುದು, 50 ಲಕ್ಷ ರೂ. ವೆಚ್ಚದಲ್ಲಿ ದೇವಾಲಯದ ಆವರಣದ ತೋಟಗಾರಿಕೆ ಸೇರಿದಂತೆ ನಾಗರಿಕ ಸೌಲಭ್ಯಗಳ ಅಭಿವೃದ್ಧಿಗೆ 2.25 ಕೋಟಿ ರೂ. ಮೊತ್ತವನ್ನು ಮಂಜೂರು ಮಾಡುವಂತೆ ಡಾ| ಅಪ್ಪ ಸಚಿವರಿಗೆ ಮನವಿ ಮಾಡಿದರು. 25 ಲಕ್ಷ ರೂ. ವೆಚ್ಚದಲ್ಲಿ ಆರ್‌ಒ ವಾಟರ್‌ ಪ್ಯೂರಿಫೈಯರ್‌ಗಳನ್ನು ಅಳವಡಿಸಲಾಗುತ್ತಿದೆ. ಪಾಕಿಂìಗ್‌ ಸೌಲಭ್ಯ ಸುಧಾರಿಸಲು 25 ಲಕ್ಷ ರೂ. ಮತ್ತು 25 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯಗಳ ನಿರ್ಮಾಣ ಮತ್ತು ನೈರ್ಮಲ್ಯ ಸೌಲಭ್ಯ ನೀಡಲಾಗಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next