Advertisement

ಶರಣಬಸವ ವಿವಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

06:34 PM Sep 18, 2021 | Team Udayavani |

ಕಲಬುರಗಿ: ಇಲ್ಲಿನ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು. ಅಂದಿನ ಉಪಪ್ರಧಾನಿ ಮತ್ತು ಗೃಹ ಸಚಿವರಾಗಿದ್ದ ಸರ್ದಾರ್‌ ವಲ್ಲಭ ಭಾಯಿ ಪಟೇಲ್‌ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿದರು.

Advertisement

ಕಲ್ಯಾಣ ಕರ್ನಾಟಕ ಅಂದಿನ ಹೈದ್ರಾಬಾದ್‌ ಪ್ರಾಂತ್ಯವನ್ನು ನಿಜಾಮನ ಆಳ್ವಿಕೆಯಿಂದ ಮುಕ್ತಗೊಳಿಸುವುದನ್ನು ನೆನಪಿಸುವ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಿ ವಿಶ್ವವಿದ್ಯಾಲಯ ಉಪಕುಲಪತಿ ಡಾ| ನಿರಂಜನ್‌ ವಿ. ನಿಷ್ಠಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ಹೈದ್ರಾಬಾದ್‌ ಕರ್ನಾಟಕ ವಿಮೋಚನಾ ಚಳವಳಿಯಲ್ಲಿ ಹೋರಾಟ ಮಾಡಿದ ಮಹನೀಯರ ಕುರಿತು ಮಾಹಿತಿ ನೀಡಿದರು.

ಸಮ ಕುಲಪತಿ ಪ್ರೊ| ವಿ.ಡಿ. ಮೈತ್ರಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಕುಲಸಚಿವ (ಮೌಲ್ಯ ಮಾಪನ) ಡಾ| ಲಿಂಗರಾಜ ಶಾಸ್ತ್ರೀ, ಡೀನ್‌ ಡಾ| ಬಸವರಾಜ ಮಠಪತಿ ಹಾಗೂ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಭಾಗ ವಹಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next