Advertisement

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಥದತ್ತ

10:39 AM Jul 28, 2020 | Suhan S |

ರಾಯಚೂರು: ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ನೇಠಿಣಿತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದ ನೇರ ಪ್ರಸಾರ ಕಾರ್ಯಕ್ರಮವನ್ನು ಜಿಪಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

Advertisement

ಸರರ್ಕಾರದ ಒಂದು ವರ್ಷದ ಸಾಧನೆಗೆ ಸಂಬಂಧಿಸಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ “ಸವಾಲುಗಳ ಒಂದು ವರ್ಷ ಪರಿಹಾರದ ಸ್ಪರ್ಶ’, ಜನಪದ ಹಾಗೂ ಮಾರ್ಚ್‌ ಆಫ್‌ ಕರ್ನಾಟಕ ಪುಸ್ತಕಗಳನ್ನು ಗಣ್ಯರು ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಅಭಿವೃದ್ಧಿಯಲ್ಲಿ ಹಿಂದುಳಿದಿದ್ದ ಹೈದರಾಬಾದ್‌ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಘೋಷಿಸಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ ಎಂದು ತಿಳಿಸಿದರು.

ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ, ಜಿಪಂ ಸಿಇಒ ಲಕ್ಷ್ಮೀ ಕಾಂತ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ದುರಗೇಶ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ತಹಶೀಲ್ದಾರ್‌ ಡಾ| ಹಂಪಣ್ಣ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್‌ ಎಚ್‌.ಜಿ., ಜಿಪಂ ಉಪ ಕಾರ್ಯದರ್ಶಿ ಮಹ್ಮದ್‌ ಯೂಸೂಫ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್‌. ಎಸ್‌. ಅಬೀದ್‌, ಗ್ರಾಮೀಣ ಕುಡಿಯವ ನೀರು ಹಾಗೂ ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಗಣಪತಿ ಸಾಕರೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next