Advertisement
ವಿಶೇಷ ವಿಮಾನದ ಮೂಲಕ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಿಎಂ ಯಡಿಯೂರಪ್ಪ ತದನಂತರ ಸರ್ಧಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ರಾಷ್ಟ್ರಧ್ವಜಾರೋಹಣ ನೆರವೇರಿಸುವರು.
Related Articles
Advertisement
ವಿಮಾನ ನಿಲ್ದಾಣ ಭದ್ರತೆ ಪರಿಶೀಲನೆ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದು, ಇದರ ಹಿನ್ನೆಲೆಯಲ್ಲಿ ಕಲಬುರಗಿ ಪೊಲೀಸ್ ಆಯುಕ್ತ ಡಾ| ಎಂ.ಎನ್. ನಾಗರಾಜ, ಜಿಲ್ಲಾಧಿಕಾರಿ ಬಿ. ಶರತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಹಾಗೂ ಡಿಸಿಪಿ ಬಿ. ಕಿಶೋರಬಾಬು ಅವರು ವಿಮಾನ ನಿಲ್ದಾಣಕ್ಕೆ ತೆರಳಿ ಭದ್ರತೆ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳುವುದು, ಪೊಲೀಸ್‌ರಿಂದ ಗೌರವ ವಂದನೆ ಸ್ವೀಕರಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಅಮೀನ್ ಮುಖ್ತಾರ್ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳಲು ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ಡಾ| ಬಿ. ಗೋಪಾಲಕೃಷ್ಣ ರಾಘವೇಂದ್ರ, ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.