Advertisement

ಮರೆಯಾದ ಕಂಚಿನ ಕಂಠ; ಭಾಗವತಿಕೆಗೆ ಮಂಗಳ ಹಾಡಿದ ಬಲಿಪ ಭಾಗವತರು

08:17 PM Feb 16, 2023 | Team Udayavani |

ಮಂಗಳೂರು : ಯಕ್ಷಗಾನ ರಂಗ ಕಂಡ ತೆಂಕುತಿಟ್ಟಿನ ಪ್ರಖ್ಯಾತ ಭಾಗವತ ಬಲಿಪ ನಾರಾಯಣ ಭಾಗವತ ಅವರು ಗುರುವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

Advertisement

ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಮೂಡಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದರು. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದರು.

ಬಲಿಪ ಭಾಗವತರ ನಿಧಾನಕ್ಕೆ ಗಣ್ಯರು, ಜನಪ್ರತಿನಿಧಿಗಳು ಸೇರಿ ಸಾವಿರಾರು ಮಂದಿ ಕಲಾವಿದರು ತೀವ್ರ ಸಂತಾಪ ಸೂಚಿಸಿದ್ದಾರೆ.

ಇವರ ಪುತ್ರ ಭಾಗವತ ಪ್ರಸಾದ್ ಅವರು 2022 ಏಪ್ರಿಲ್ ತಿಂಗಳಿನಲ್ಲಿ ಇಹಲೋಕ ತ್ಯಜಿಸಿದ್ದರು.

ದೇವಿ ಮಾಹಾತ್ಮೆ, ಕಟೀಲು ಕ್ಷೇತ್ರ ಮಾಹಾತ್ಮೆ, ತೆಂಕು ತಿಟ್ಟಿನ ಎಲ್ಲಾ ಪೌರಾಣಿಕ ಪ್ರಸಂಗಳ ಪದ್ಯಗಳಿಗೆ ತನ್ನ ಪರಿಪೂರ್ಣ ಯಕ್ಷಗಾನೀಯ ಶೈಲಿಯ ಏರು ಸ್ವರದ ಭಾಗವತಿಕೆಯ ಮೂಲಕ ಪರಿಪೂರ್ಣ ನ್ಯಾಯ ಒದಗಿಸಿಕೊಟ್ಟವರು ಬಲಿಪ ಭಾಗವತರು.

Advertisement

ಬಲಿಪ ನಾರಾಯಣ ಭಾಗವತರು 60ಕ್ಕೂ ಹೆಚ್ಚು ವರ್ಷಗಳ ಕಾಲ ಸುದೀರ್ಘ ಯಕ್ಷಗಾನ ಕಲಾ ಸೇವೆ ಸಲ್ಲಿಸಿದ್ದಾರೆ. ಪಡ್ರೆ ಜಠಾಧಾರಿ ಮೇಳವನ್ನು ಮೊದಲಿಗೆ ಆರಂಭಿಸಿದ್ದರು. ಯಕ್ಷಗಾನದ 50ಕ್ಕೂ ಹೆಚ್ಚು ಪ್ರಸಂಗಗಳ ಕಂಠಪಾಠ ಬಲಿಪ ಭಾಗವತರಿಗಿತ್ತು.30 ಪ್ರಕಟಿತ ಮತ್ತು 15 ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ.

ತೆಂಕು ತಿಟ್ಟು ಯಕ್ಷ ರಂಗದ ಭೀಷ್ಮ ಎಂದು ಕರೆಯುತ್ತಿದ್ದರು.ಯಕ್ಷಾಭಿಮಾನಿಗಳು ಬಲಿಪ ಅಮೃತ ಭವನವನ್ನು ಕಟ್ಟಿಸಿಕೊಟ್ಟಿದ್ದಾರೆ.ಬಲಿಪ ನಾರಾಯಣ ಭಾಗವತರು ”ಐದು ದಿನದ ದೇವೀ ಮಹಾತ್ಮೆ” ಎಂಬ ಮಹಾಪ್ರಸಂಗವನ್ನು ರಚಿಸಿದ್ದು ಯಕ್ಷಗಾನದ ಇತಿಹಾಸದಲ್ಲೇ ಮಹತ್ವದ ಕೃತಿಯಾಗಿ ಮೂಡಿ ಬಂದಿದೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಸಾವಿರಾರು ಸನ್ಮಾನಗಳು ಅವರಿಗೆ ಸಂದಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next