Advertisement

ಮಹಿಳೆ ಮೇಲೆ ಮೂತ್ರವಿಸರ್ಜನೆ ಪ್ರಕರಣ: ಆರೋಪಿಯನ್ನು ಕೆಲಸದಿಂದ ಕಿತ್ತು ಹಾಕಿದ ಕಂಪನಿ

11:02 PM Jan 06, 2023 | Team Udayavani |

ನವದೆಹಲಿ: ಏರ್‌ಇಂಡಿಯಾ ವಿಮಾನದಲ್ಲಿ ನ.26ರಂದು ಸಹ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ವ್ಯಕ್ತಿಯ ವಿರುದ್ಧ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿದೆ ಎಂದು ದಿಲ್ಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

Advertisement

ಆರೋಪಿ ತಲೆಮರೆಸಿಕೊಂಡಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಮತ್ತೊಂದೆಡೆ ಆರೋಪಿ ಕಾರ್ಯನಿರ್ವಹಿಸುತ್ತಿದ್ದ ಮುಂಬೈನ ಸಂಸ್ಥೆ ಕೆಲಸದಿಂದ ಆತನನ್ನು ವಜಾಗೊಳಿಸಿದೆ.

ಇನ್ನು, ಏರ್‌ಇಂಡಿಯಾ ವಿಮಾನದಲ್ಲಿ ನಡೆದ ಘಟನೆಗಳನ್ನು ಪರಿಗಣಿಸಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಎಲ್ಲ ವಿಮಾನಯಾನ ಸಂಸ್ಥೆಗಳಿಗೂ ಸುತ್ತೋಲೆ ಹೊರಡಿಸಿದ್ದು, ವಿಮಾನದಲ್ಲಿ ಪ್ರಯಾಣಿಕರ ಯಾವುದೇ ಅಶಿಸ್ತಿನ ನಡವಳಿಕೆ ಕಂಡುಬಂದರೂ ಆ ಬಗ್ಗೆ ಕ್ರಮ ಕೈಗೊಳ್ಳಬೇಕು ಹಾಗೂ ಕಾನೂನು ಜಾರಿ ಸಂಸ್ಥೆಗೆ ತಕ್ಷಣವೇ ಮಾಹಿತಿ ನೀಡಬೇಕು.. ಇಲ್ಲದಿದ್ದಲ್ಲಿ ವಿಮಾನಯಾನ ಸಂಸ್ಥೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next