Advertisement

ವೆಂಡಿವೀರನ್‌ ಪಗಾಡಿಯ ಜಯಂತಿ ಆಚರಣೆ

12:16 PM Aug 22, 2020 | Suhan S |

ದೇವನಹಳ್ಳಿ: ಸ್ವಾತಂತ್ರ ಸಂಗ್ರಾಮದ ಪ್ರಥಮ ಹೋರಾಟಗಾರ, ಸೇನಾಧಿಪತಿ ವೆಂಡಿವೀರನ್‌ ಪಗಾಡಿಯ ಅವರ ಚರಿತ್ರೆಯನ್ನು ಸಮಾಜದ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು ಎಂದು ರಾಜ್ಯ ಮಾದಿಗ ದಂಡೋರ ಸಮಿತಿ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ಶಂಕರಪ್ಪ ಹೇಳಿದರು.

Advertisement

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಮಾದಿಗ ದಂಡೋರ ರಾಜ್ಯ ಸಮಿತಿ ವತಿಯಿಂದ ನಡೆದ ಸ್ವಾತಂತ್ರ್ಯ ಸಂಗ್ರಾಮದ ಪ್ರಥಮ ಹೋರಾಟಗಾರ ಸೇನಾಧಿಪತಿ ವೆಂಡಿ ವೀರನ್‌ ಪಗಾಡಿಯ ಅವರ 249ನೇ ಜಯಂತಿ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿಯೇ ಮೊದಲ ಬಾರಿಗೆ ವೆಂಡಿವೀರನ್‌ ಪಗಾಡಿಯ ಜಯಂತಿ ಆಚರಿಸುತ್ತಿದ್ದೇವೆ. ಬಿಜೆಪಿ ನನ್ನನ್ನು ಗುರುತಿಸಿ ರ ಜ್ಯ ಘಟಕದ ಉಪಾಧ್ಯಕ್ಷ ಸ್ಥಾನ ನೀಡಿದೆ. ಮಾದಿಗರಿಗೆ ಪ್ರತ್ಯೇಕ ಮೀಸಲಾತಿ ಪ್ರಸ್ತಾಪದ ಬೇಡಿಕೆ ಇಟ್ಟಿದ್ದೇನೆ. ಸಾಮಾಜಿಕ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.

ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ಒಂದು ಸಮುದಾಯಕ್ಕೆ ಸೀಮಿತವಾಗಿ ಕೆಲಸ ಮಾಡದೆ ಜಾತ್ಯತೀತ ಭಾವನೆಯಿಂದ 5 ವರ್ಷ ಕಪ್ಪುಚುಕ್ಕಿ ಇಲ್ಲದಂತೆ ಕೆಲಸ ಮಾಡಿದ್ದೇನೆ ಎಂದರು. ಮಾದಿಗ ದಂಡೋರ ಸಮಿತಿ ರಾಜ್ಯ ಪ್ರಚಾರ ಅಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ಮಾತನಾಡಿದರು. ಜಿಲ್ಲಾ ಮಾದಿಗ ದಂಡೋರ ಅಧ್ಯಕ್ಷ ಜಿ.ಮಾರಪ್ಪ, ತಾಲೂಕು ಮಾದಿಗ ದಂಡೋರ ಅಧ್ಯಕ್ಷ ಕದಿರಪ್ಪ, ಪ್ರಜಾ ವಿಮೋಚನಾ ಬಹುಜನ ಸಮಿತಿ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಬಿಜ್ಜವಾರ ನಾಗರಾಜ್‌, ಮಾದಿಗ ದಂಡೋರ ರಾಜ್ಯ ಖಜಾಂಚಿ ಮುನಿರಾಜು, ತಾಪಂ ಮಾಜಿ ಅಧ್ಯಕ್ಷ ನಾರಾಯಣ ಸ್ವಾಮಿ, ತಾಪಂ ಸದಸ್ಯ ಗೋಪಾಲಸ್ವಾಮಿ, ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಮುನಿರಾಜು, ಆದಿಜಾಂಬವ ಸೇವಾ ಟ್ರಸ್ಟ್‌ ಅಧ್ಯಕ್ಷ ಎಂ.ಎಂ.ಶ್ರೀನಿವಾಸ್‌ ಮತ್ತಿತರರು ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next