Advertisement

ವೆನ್ಲಾಕ್‌ ದುರಸ್ತಿ ತ್ವರಿತ: ಡಿಸಿ ಶಶಿಕಾಂತ ಸೆಂಥಿಲ್‌ ಸೂಚನೆ

12:38 AM Aug 27, 2019 | Sriram |

ಮಂಗಳೂರು: ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯಲ್ಲಿ ದುರಸ್ತಿ ಕಾಮಗಾರಿಗಳನ್ನು ತ್ವರಿತಗತಿಯಿಂದ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು. ಕಾಮಗಾರಿ ಸಂದರ್ಭದಲ್ಲಿ ರೋಗಿಗಳಿಗೆ ಯಾವುದೇ ತೊಂದರೆ ಆಗದ ಹಾಗೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಸೂಚಿಸಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ವೆನಾÉಕ್‌ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಯಿಂದಾಗಿ ಸಣ್ಣಪುಟ್ಟ ಹಾನಿ ಆಗಿರುವ ಆಸ್ಪತ್ರೆಯ ಕಟ್ಟಡದ ದುರಸ್ತಿ ಕಾಮಗಾರಿ ತುರ್ತಾಗಿ ಪೂರ್ಣಗೊಳ್ಳಬೇಕು ಮತ್ತು ನೂತನವಾಗಿ ನಿರ್ಮಿಸಲಾಗಿರುವ 300 ಹಾಸಿಗೆಗಳ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ಕೂಡ ಒಂದು ತಿಂಗಳ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಚ್ಚುವರಿ 24 ಹಾಸಿಗೆ ಸಾಮರ್ಥ್ಯದ ಐಸಿಯು ವಾರ್ಡ್‌ ಇರಲಿದೆ. ಸುಮಾರು 100 ಶುಶ್ರೂಷಕಿಯರು,100 ಗ್ರೂಪ್‌ ಡಿ, 3 ಐಸಿಯು ಸ್ಪೆಷಲಿಸ್ಟ್‌, 4 ಐಸಿಯು ಟೆಕ್ನೀಷಿಯನ್‌, 4 ಲ್ಯಾಬ್‌ ಟೆಕ್ನೀಷಿಯನ್‌ ಅಗತ್ಯವಿದ್ದು, ಸರಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದರು.

ಆಯುಷ್ಮಾನ್‌ ಭಾರತ ಮತ್ತು ಆರೋಗ್ಯ ಕರ್ನಾಟಕದ ಯೋಜನೆಗಳು ಜನಸಾಮಾನ್ಯರಿಗೆ ಸಮರ್ಪಕವಾಗಿ ದೊರಕಲು ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ಚು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ವೆನ್ಲಾಕ್‌ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ರಾಜೇಶ್ವರಿದೇವಿ ಆಸ್ಪತ್ರೆಯ ವಾರ್ಷಿಕ ಆಯವ್ಯಯ, ವಿವಿಧ ಆರೋಗ್ಯ ಯೋಜನೆಗಳ ಮೂಲಕ ಫಲಾನುಭವಿಗಳಿಗೆ ದೊರೆತ ಸೌಲಭ್ಯಗಳ ವರದಿಯನ್ನು ಮಂಡಿಸಿದರು.

Advertisement

ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಾಹುಲ್‌ ಸಿಂಧ್ಯಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್‌, ಕೆಎಂಸಿ ಆಸ್ಪತ್ರೆಯ ಡೀನ್‌ ಡಾ| ವೆಂಕಟ್ರಾಯ ಪ್ರಭು, ವಿವಿಧ ಇಲಾಖೆ ಅಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next