ನವದೆಹಲಿ: ಇತ್ತೀಚೆಗಷ್ಟೇ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡ ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಕೇಂದ್ರ ಸರ್ಕಾರ ಗಣ್ಯ ವ್ಯಕ್ತಿಗಳಿಗೆ ನೀಡುವ “ವೈ ಪ್ಲಸ್” ಭದ್ರತೆಯನ್ನು ನೀಡಿರುವುದಾಗಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಒಳಉಡುಪು, ಸ್ಯಾನಿಟರಿ ಪ್ಯಾಡ್ ಗಳಲ್ಲಿ ಕೋಟಿ ರೂ ಮೌಲ್ಯದ ಅಕ್ರಮ ಚಿನ್ನಸಾಗಾಟ: ಮಹಿಳೆ ವಶಕ್ಕೆ
ಪಶ್ಚಿಮಬಂಗಾಳದ ಚುನಾವಣೆ ಹಿನ್ನೆಲೆಯಲ್ಲಿ ನಟ ಮಿಥುನ್ ಚಕ್ರವರ್ತಿಗೆ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ ಎಫ್) ಭದ್ರತೆಯನ್ನು ನೀಡಲಿದ್ದು, ಇದನ್ನು ಎಸ್ ಎಸ್ ಜಿ(ಸ್ಪೆಷಲ್ ಸೆಕ್ಯುರಿಟಿ ಗ್ರೂಪ್) ಎಂದು ಕರೆಯಲಾಗುತ್ತದೆ.
ಕೋಲ್ಕತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ನಟ ಮಿಥುನ್ ಚಕ್ರವರ್ತಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಪಶ್ಚಿಮಬಂಗಾಳದ ಚುನಾವಣಾ ಪ್ರಚಾರ ನಡೆಸುವ ಸಂದರ್ಭದಲ್ಲಿ ನಟ ಮಿಥುನ್ ಚಕ್ರವರ್ತಿಗೆ ವೈ ಪ್ಲಸ್ ಹಾಗೂ ಸಿಐಎಸ್ ಎಫ್ ಕಮಾಂಡೋ ಭದ್ರತೆ ನೀಡಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ವಿವರಿಸಿದೆ.
294 ಸದಸ್ಯ ಬಲದ ಪಶ್ಚಿಮಬಂಗಾಳ ವಿಧಾನಸಭೆಗೆ ಮಾರ್ಚ್ 27ರಿಂದ ಏಪ್ರಿಲ್ 29ರವರೆಗೆ ಒಟ್ಟು ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ 2ರಂದು ಎಲ್ಲಾ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.