Advertisement

ಭವಾನಿಪುರ ಉ.ಚುನಾವಣೆ: ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

02:34 PM Sep 10, 2021 | Team Udayavani |

ಕೋಲ್ಕತ್ತ: ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ.

Advertisement

ಇಂದು ಸರ್ವೇ ಭವನಕ್ಕೆ ಆಗಮಿಸಿದ ದೀದಿ, ಭವಾನಿಪುರ ವಿಧಾನ ಸಭಾ ಮತಕ್ಷೇತ್ರಕ್ಕೆ ಟಿಎಂಸಿ ಪಕ್ಷದ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.

ಭವಾನಿಪುರ ಕ್ಷೇತ್ರದಲ್ಲಿ ದೀದಿ ವಿರುದ್ಧ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ಅವರು ಸ್ಪರ್ಧಿಸುತ್ತಿದ್ದಾರೆ. ಸಿಪಿಐ-ಎಂ ಪಕ್ಷದಿಂದ ಶ್ರೀಜಿಬ್ ಬಿಸ್ವಾಸ್ ಅವರು ಕಣಕ್ಕಿಳಿದಿದ್ದಾರೆ.

ಇನ್ನು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ.

Advertisement

ಮಮತಾ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. 2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು. ಸೆ.30ರಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್‌ ನಿರ್ಧರಿಸಿದೆ. ಅಕ್ಟೋಬರ್‌ 3 ರಂದು ಫಲಿತಾಂಶ ಪ್ರಕಟವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next