ಲಕ್ನೋ:ಪಶ್ಚಿಮಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರ ಚುನಾವಣಾ ಪ್ರಚಾರಕ್ಕೆ 24ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗದ ವಿರುದ್ಧ ಮಂಗಳವಾರ(ಏಪ್ರಿಲ್ 13) ಧರಣಿ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಮಸ್ಕಿಯಲ್ಲಿ ಲಂಬಾಣಿ ಮತ ಸೆಳೆಯಲು ತೆಲುಗು ಸಿಂಗರ್ ಮಂಗ್ಲಿ ಮೋಡಿ!
ಚುನಾವಣಾ ಪ್ರಚಾರಕ್ಕೆ ಆಯೋಗ ಹೇರಿರುವ ನಿಷೇಧ ಅಸಾಂವಿಧಾನಿಕ ಎಂದು ಹೇಳಿರುವ ಮಮತಾ ಬ್ಯಾನರ್ಜಿ ಗಾಂಧಿ ಪ್ರತಿಮೆ ಮುಂದೆ ಗಾಲಿ ಕುರ್ಚಿಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಮಮತಾ ಬ್ಯಾನರ್ಜಿ ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ತೃಣಮೂಲ ಕಾಂಗ್ರೆಸ್ ನ ಮುಖಂಡರು, ಬೆಂಬಲಿಗರಿಗೆ ಪಾಲ್ಗೊಳ್ಳಲು ಅವಕಾಶ ನೀಡಿಲ್ಲ. ಮಮತಾ ಬ್ಯಾನರ್ಜಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೇಂದ್ರ ಪೊಲೀಸ್ ಪಡೆ ವಿರುದ್ಧ ಘೇರಾವ್ ಹಾಕುವಂತೆ ಹಾಗೂ ಧರ್ಮದ ಆಧಾರದ ಮೇಲೆ ಮತ ಹಾಕುವಂತೆ ಮತದಾರರನ್ನು ಪ್ರೇರೇಪಿಸಿದ ಕಾರಣಕ್ಕೆ ಮಮತಾ ಬ್ಯಾನರ್ಜಿ ಅವರ ಚುನಾವಣಾ ಪ್ರಚಾರಕ್ಕೆ ಚುನಾವಣಾ ಆಯೋಗ 24ಗಂಟೆಗಳ ನಿಷೇಧ ಹೇರಿತ್ತು.