Advertisement

ಕೋವಿಡ್:ಆಗಸ್ಟ್ 30ರವರೆಗೆ ಪಶ್ಚಿಮಬಂಗಾಳದಲ್ಲಿ ಲಾಕ್ ಡೌನ್ ವಿಸ್ತರಣೆ, ಕರ್ಫ್ಯೂ ಸಮಯ ಸಡಿಲಿಕೆ

04:02 PM Aug 12, 2021 | Team Udayavani |

ಕೋಲ್ಕತಾ: ಕೋವಿಡ್ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳ ಸರ್ಕಾರ ಲಾಕ್ ಡೌನ್ ಅನ್ನು ಆಗಸ್ಟ್ 30ರವರೆಗೆ ವಿಸ್ತರಿಸಿದ್ದು, ರಾತ್ರಿ ಕರ್ಫ್ಯೂ ಸಮಯವನ್ನು ಸಡಿಲಗೊಳಿಸಿ ಗುರುವಾರ (ಆಗಸ್ಟ್ 12) ಹೊಸ ಆದೇಶ ಹೊರಡಿಸಿದೆ.

Advertisement

ರಾತ್ರಿ 11ಗಂಟೆಯಿಂದ ಬೆಳಗ್ಗಿನ ಜಾವ 5ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಮೊದಲು ರಾತ್ರಿ 9ಗಂಟೆಯಿಂದ ಬೆಳಗ್ಗಿನ ಜಾವ 5ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಬುಧವಾರ ಕೋವಿಡ್ 19 ಸೋಂಕಿಗೆ ಪಶ್ಚಿಮಬಂಗಾಳದಲ್ಲಿ ಆರು ಮಂದಿ ಸಾವನ್ನಪ್ಪಿದ್ದರು.

ಇದರೊಂದಿಗೆ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 18,258ಕ್ಕೆ ಏರಿಕೆಯಾಗಿದ್ದು, ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 15,35,699ಕ್ಕೆ ಹೆಚ್ಚಳವಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ದಕ್ಷಿಣ 24 ಪರ್ಗಣಾಸ್, ಹೌರ್ , ಹೂಗ್ಲಿ ಜಿಲ್ಲೆಗಳಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿಲ್ಲ. ಉತ್ತರ 24 ಪರ್ಗಣಾಸ್ ಜಿಲ್ಲೆಯಲ್ಲಿ ಕೋವಿಡ್ ನಿಂದ ಒಬ್ಬರು ಸಾವನ್ನಪ್ಪಿದ್ದು, ರಾಜ್ಯದಲ್ಲಿ 10,163 ಸಕ್ರಿಯ ಕೋವಿಡ್ ಪ್ರಕರಣಗಳಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next