Advertisement
ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟ್ಟರ್ ಮೂಲಕ ಪತ್ರವೊಂದನ್ನು ಹಂಚಿಕೊಳ್ಳುವುದರ ಮೂಲಕ ನಿರ್ದೇಶನ ಹೊರಡಿಸಿದ ಧಂಕರ್, “ ಮಮತಾ ಬ್ಯಾನರ್ಜಿ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಅತ್ಯಂತ ಆತಂಕಕಾರಿ ಸನ್ನಿವೇಶ ಇದು. ಇಂತಹ ಭೀಕರ ಪರಿಸ್ಥಿತಿಯಲ್ಲಿ ಜೂನ್ 7 ರ ಸೋಮವಾರದಂದು ಕಾನೂನು ಸುವ್ಯವಸ್ಥೆ ಕುರಿತು ಸಂಕ್ಷಿಪ್ತವಾಗಿ ಮಾಹಿತಿ ನೀಡವಂತೆ ಮತ್ತು ಚುನಾವಣೋತ್ತರ ಹಿಂಸಾಚಾರವನ್ನು ತಡೆಗಟ್ಟಲು ತೆಗೆದುಕೊಂಡ ಎಲ್ಲಾ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಕರೆ ನೀಡಿದ್ದಾರೆ.
Related Articles
Advertisement
ಇನ್ನು, ಕಳೆದ ಮೇ 2 ರಂದು ಪಶ್ಚಿಮ ಬಂಗಳದ ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯದ ಹಲವಾರು ಕಡೆಗಳಲ್ಲಿ ಹಿಂಸಾಚಾರಗಳು ನಡೆದಿದ್ದವು. ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಚುನಾವಣೋತ್ತರ ಹಿಂಸಾಚಾರದಲ್ಲಿ ಪಕ್ಷದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ, ಇದೆಲ್ಲದಕ್ಕೂ ತೃಣಮೂಲ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು ಬಿಜೆಪಿ ದೀದಿ ಪಕ್ಷವನ್ನು ಆರೋಪಿಸಿತ್ತು. ಆದರೇ, ತೃಣಮೂಲ ಕಾಂಗ್ರೆಸ್ ಬಿಜೆಪಿ ರಾಜಕೀಯ ದ್ವೇಷದಿಂದ ಈ ಆರೋಪವನ್ನು ಮಾಡುತ್ತಿದೆ. ತೃಣಮೂಲ ಕಾಂಗ್ರೆಸ್ ನಲ್ಲಿ ಇಂತಹ ಹಿಂಸಾಚಾರ ಮಾಡುವಂತ ಮನಸ್ಥಿತಿಯವರು ಇಲ್ಲ. ಇದು ಬಿಜೆಪಿ ಪಕ್ಷದವರ ಕುತಂತ್ರ ಎಂದು ತನ್ನನ್ನು ತಾನು ಸಮರ್ಥಿಸಿಕೊಂಡಿತ್ತು. ಏತನ್ಮಧ್ಯೆ, ಪಶ್ಚಿಮ ಬಂಗಾಳದ ಪುರ್ಬಾ ಮಿಡ್ನಾಪೊರ್ ನ ಕಾಂತಿ ಪುರಸಭೆ ಕಚೇರಿಯಿಂದ ಪರಿಹಾರ ಸಾಮಗ್ರಿಗಳನ್ನು ಕದ್ದ ಆರೋಪದ ಮೇಲೆ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೇಂದು ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ಧಂಕರ್ ರಾಜ್ಯದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಟಿಎಂಸಿಯಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಇದನ್ನೂ ಓದಿ : 80 ಕೋಟಿ ಜನರಿಗೆ ಪಡಿತರ ನೀಡಿದ್ದೇವೆ : ಕೇಜ್ರಿವಾಲ್ ಆರೋಪಕ್ಕೆ ಕೇಂದ್ರ ತಿರುಗೇಟು