Advertisement

ಮುಸ್ಲಿಂ ವಿದ್ಯಾರ್ಥಿಗಳಿಗೆ ಬೇರೆ ಊಟದ ಕೋಣೆ?

01:28 AM Jun 29, 2019 | Team Udayavani |

ಕೋಲ್ಕತಾ/ನವದೆಹಲಿ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ ಜಿಲ್ಲೆಯ ಮುಸ್ಲಿಂ ವಿದ್ಯಾರ್ಥಿಗಳು ಶೇ.70 ಕ್ಕಿಂತ ಹೆಚ್ಚಿರುವ ಸರ್ಕಾರಿ ಶಾಲೆಗಳಲ್ಲಿ ಊಟಕ್ಕೆ ಪ್ರತ್ಯೇಕ ಕೊಠಡಿ ನಿರ್ಮಿಸಲು ಟಿಎಂಸಿ ಸರ್ಕಾರ ನಿರ್ಧರಿಸಿದೆ ಎಂದು ಆರೋಪಿಸಲಾಗಿದೆ. ಈ ಬಗೆಗಿನ ಸುತ್ತೋಲೆ ಪ್ರತಿಯನ್ನು ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಟ್ವೀಟ್ ಮಾಡಿದ್ದಾರೆ. ಧರ್ಮದ ಆಧಾರದಲ್ಲಿ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸುವುದರ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

Advertisement

ಈ ವಿವಾದಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆ ಉಲ್ಲೇಖೀಸಿ ಸ್ಪಷ್ಟನೆ ನೀಡಿರುವ ಆಡಳಿತಾರೂಢ ಟಿಎಂಸಿ, ‘ಇಂಥ ಸುತ್ತೋಲೆ ಬಗ್ಗೆ ಮಾಹಿತಿ ಇಲ್ಲ. ಇದು ಹಳೆಯ ಸುತ್ತೋಲೆಯಾಗಿದ್ದು, ಈಗಾಗಲೇ ಅದನ್ನು ಹಿಂಪಡೆಯಲಾಗಿದೆ. ಸರ್ಕಾರದ ಗಮನಕ್ಕೆ ಬಾರದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹೀಗಾಗಿರಬಹುದು’ ಎಂದು ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next