ಕೋಲ್ಕತಾ:ಪಶ್ಚಿಮಬಂಗಾಳದಲ್ಲಿ ನೂತನ 37 ಕೋವಿಡ್ 19 ಪ್ರಕರಣಗಳು ಪತ್ತೆಯಾಗುವ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 572ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ ಕೂಡಾ 22ರಿಂದ 33ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ಹೂಗ್ಲಿ ಮತ್ತು ಉತ್ತರ 24ನೇ ಪರಾಗಣ್ ಪ್ರದೇಶದಲ್ಲಿಯೇ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 8 ಕೋವಿಡ್ 19 ಮುಕ್ತ ಜಿಲ್ಲೆಗಳಿರುವುದಾಗಿ ವರದಿ ತಿಳಿಸಿದೆ.
ಕರ್ನಾಟಕದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 565ಕ್ಕೆ ತಲುಪಿದೆ, ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಈವರೆಗೆ 229 ಮಂದಿ ಗುಣಮುಖರಾಗಿದ್ದಾರೆ. 305 ಕೋವಿಡ್ 19 ಸೋಂಕಿತರು ಐಸೋಲೇಶನ್ ನಲ್ಲಿ ಇದ್ದಾರೆ. ಏಪ್ರಿಲ್ 29ರ ಸಂಜೆ 5ಗಂಟೆವರೆಗೆ ರಾಜ್ಯದಲ್ಲಿ 30 ಹೊಸ ಕೋವಿಡ್ 19 ಪ್ರಕರಣಗಳು ದೃಢಪಟ್ಟಿರುವುದಾಗಿ ವರದಿ ವಿವರಿಸಿದೆ.
ತಮಿಳುನಾಡಿನಲ್ಲಿ ಒಟ್ಟು 2,323 ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ 1,258 ಜನರು ಗುಣಮುಖರಾಗಿದ್ದಾರೆ. ಗುರುವಾರದವರೆಗೆ 9,787 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷಿಸಲಾಗಿದೆ.
ಭಾರತದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 31,787ಕ್ಕೆ ಏರಿಕೆಯಾಗಿದೆ. ಇದರಲ್ಲಿ 8,325 ಮಂದಿ ಗುಣಮುಖರಾಗಿದ್ದು, ಡಿಸ್ ಚಾರ್ಚ್ ಆಗಿದ್ದಾರೆ. ಈವರೆಗೆ ಒಟ್ಟು 1074 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 1,718 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 67 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸಚಿವಾಲಯ ತಿಳಿಸಿದೆ.