ಪಶ್ಚಿಮಬಂಗಾಳ: ಮದುವೆ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದಾಗ, ಕಚ್ಚಾ ಬಾಂಬ್ ಸ್ಪೋಟಗೊಂಡ ಪರಿಣಾಮ ಆರು ಮಂದಿ ಬಿಜೆಪಿ ಕಾರ್ಯಕರ್ತರು ಗಾಯಗೊಂಡ ಘಟನೆ ರಾಂಪುರ ಗ್ರಾಮದಲ್ಲಿ ನಡೆದಿದೆ.
ಶುಕ್ರವಾರ (ಮಾ.5) ರಾತ್ರಿ ಈ ದುರಂತ ನಡೆದಿದ್ದು, ಘಟನೆಗೆ ಟಿಎಂಸಿ ಕಾರ್ಯಕರ್ತರೇ ಕಾರಣ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
ಮದುವೆ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದಾಗ ಟಿಎಂಸಿ ಕಾರ್ಯಕರ್ತರೇ ಕಚ್ಚಾ ಬಾಂಬ್ ಎಸೆದಿದ್ದಾರೆ ಎಂದು ಬಿಜೆಪಿ ಮುಖಂಡರು ದೂರು ನೀಡಿದ್ದಾರೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ಮೋದಿ ಫೋಟೋ ತೆಗೆಯಿರಿ: ಚುನಾವಣಾ ಆಯೋಗ ಸೂಚನೆ
ಪಶ್ಚಿಮಬಂಗಾಳ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವಿನ ಸಂಘರ್ಷ ತಾರಕಕ್ಕೇರಿದೆ ಎಂದು ವರದಿ ತಿಳಿಸಿದೆ. ಮಾರ್ಚ್ 27 ರಿಂದ 294 ವಿಧಾನಸಭಾ ಕ್ಷೇತ್ರಗಳಿಗೆ ಎಂಟು ಹಂತದಲ್ಲಿ ಚುನಾವಣೆ ನಡೆಯಲಿದೆ.
ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶುಕ್ರವಾರ (ಮಾ.5) ಘೋಷಿಸಿಕೊಂಡಿದ್ದಾರೆ. ಈಗಾಗಲೇ ಟಿಎಂಸಿ ಪಕ್ಷ 291 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, 50 ಮಂದಿ ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ.
ಇದನ್ನೂ ಓದಿ: 13 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 20 ರೂ. ನೀಡಿ ಯಾರಿಗೂ ತಿಳಿಸಬೇಡವೆಂದರು !