ಕೋಲ್ಕತ: ಶಿಕ್ಷಕರ ನೇಮಕಾತಿ ಹಗರಣದ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಆಪ್ತೆ ಅರ್ಪಿತಾ ಮುಖರ್ಜಿಗೆ ಸೇರಿದ್ದ 46.22 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ (ಸೆ.19) ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರವೀಣ್ ಕುಟುಂಬಕ್ಕೆ ನೀಡಿದ ಭರವಸೆ ಈಡೇರಿಸಿ, ತಪ್ಪಿದರೆ ಸಿಎಂ ಮುಖಕ್ಕೆ ಮಸಿ : ಮುತಾಲಿಕ್
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೀಡಿರುವ ಪ್ರಕಟಣೆಯಲ್ಲಿ, ಪಾರ್ಥ ಚಟರ್ಜಿ ಮತ್ತು ಅರ್ಪಿತಾಗೆ ಸೇರಿದ ಫ್ಲ್ಯಾಟ್, ಫಾರ್ಮ್ ಹೌಸ್ ಸೇರಿದಂತೆ ಒಟ್ಟು 40.33 ಕೋಟಿ ರೂಪಾಯಿ ಮೌಲ್ಯದ 40 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಇದನ್ನು ಹೊರತುಪಡಿಸಿ 35 ಬ್ಯಾಂಕ್ ಖಾತೆಗಳಲ್ಲಿ ಇರುವ 7.89 ಕೋಟಿ ರೂಪಾಯಿ ಠೇವಣಿ ಜಪ್ತಿ ಮಾಡಲಾಗಿದೆ ಎಂದು ವಿವರಿಸಿದೆ.
ಜಪ್ತಿ ಮಾಡಲಾದ ಸ್ಥಿರಾಸ್ತಿಯು ಬಹುತೇಕ ನಕಲಿ ಕಂಪನಿ ಮತ್ತು ವ್ಯಕ್ತಿಗಳ ಹೆಸರನ್ನು ಹೊಂದಿರುವುದಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿಕಟವರ್ತಿ, ಸಚಿವ ಪಾರ್ಥ ಚಟರ್ಜಿಯನ್ನು ಜುಲೈ 23ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.