Advertisement

INDvsWI ಟಾಸ್ ಗೆದ್ದ ವಿಂಡೀಸ್; ಭಾರತ ತಂಡದಲ್ಲಿಲ್ಲ ರೋಹಿತ್, ವಿರಾಟ್ ಕೊಹ್ಲಿ

06:38 PM Jul 29, 2023 | Team Udayavani |

ಬಾರ್ಬಡೋಸ್: ಮೊದಲ ಪಂದ್ಯ ಗೆದ್ದು ಏಕದಿನ ಸರಣಿಯಲ್ಲಿ ಶುಭಾರಂಭಗೈದಿದ್ದ ಭಾರತ ತಂಡವು ಇಂದು ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಮುಖಾಮುಖಿಗೆ ಸಜ್ಜಾಗಿದೆ. ಬಾರ್ಬಡೋಸ್ ನ ಕೆನ್ನಿಂಗ್ಸ್ಟನ್ ಓವಲ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಶಾಯ್ ಹೋಪ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.

Advertisement

ಮಹತ್ವದ ಬದಲಾವಣೆಯಲ್ಲಿ ರೋಹಿತ್ ಶರ್ಮಾ ಬದಲು ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸುತ್ತಿದ್ದಾರೆ. ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಸಂಜು ಸ್ಯಾಮ್ಸನ್ ಮತ್ತು ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ.

ವೆಸ್ಟ್ ಇಂಡೀಸ್ ನಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಪೊವೆಲ್ ಮತ್ತು ಡ್ರೇಕ್ಸ್ ಬದಲಿಗೆ ಅಲ್ಜಾರಿ ಜೋಸೆಫ್ ಮತ್ತು ಕೀಸಿ ಕಾರ್ಟಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಮೊದಲ ಏಕದಿನ ಪಂದ್ಯವನ್ನು ಭಾರತವು ಸುಲಭದಲ್ಲಿ ಗೆದ್ದುಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ವೆಸ್ಟ್ ಇಂಡೀಸ್ ಕೇವಲ 114 ರನ್ ಗಳಿಗೆ ಆಲೌಟಾಗಿದ್ದರೆ, ಭಾರತವು 22.5 ಓವರ್ ಗಳಲ್ಲಿ ಅದನ್ನು ಚೇಸ್ ಮಾಡಿತ್ತು. ಕುಲದೀಪ್ ಯಾದವ್, ರವೀಂದ್ರ ಜಡೇಜಾ ಮತ್ತು ಇಶಾನ್ ಕಿಶನ್ ಅವರು ಭಾರತದ ಗೆಲುವಿನಲ್ಲಿ ಮಿಂಚಿದ್ದರು.

ತಂಡಗಳು

Advertisement

ವೆಸ್ಟ್ ಇಂಡೀಸ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಾಯ್ ಹೋಪ್ (ವಿ/ನಾ), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಗುಡಕೇಶ್ ಮೋಟಿ, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್

ಭಾರತ: ಶುಭಮನ್ ಗಿಲ್, ಇಶಾನ್ ಕಿಶನ್ (ವಿ.ಕೀ), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್

Advertisement

Udayavani is now on Telegram. Click here to join our channel and stay updated with the latest news.

Next