Advertisement

ಪಶ್ಚಿಮ ವಲಯ ಐಜಿಪಿ ಅರುಣ್‌ ಚಕ್ರವರ್ತಿ

06:00 AM Feb 10, 2018 | |

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ ಪಶ್ಚಿಮ ವಲಯದ ಐಜಿಪಿಯಾಗಿ ಜೆ. ಅರುಣ್‌ ಚಕ್ರವರ್ತಿ ಅವರನ್ನು ನೇಮಕ ಮಾಡಲಾಗಿದೆ. ಅವರು ಈವರೆಗೆ ಬೆಂಗಳೂರಿನಲ್ಲಿ ಆಂತರಿಕ ಭದ್ರತಾ ವಿಭಾಗದ ಐಜಿಪಿ ಆಗಿದ್ದರು.

Advertisement

ಪ್ರಸ್ತುತ ಇರುವ ಪಶ್ಚಿಮ ವಲಯದ ಐಜಿಪಿ ಹೇಮಂತ್‌ ನಿಂಬಾಳ್ಕರ್‌ ಅವರನ್ನು ವರ್ಗಾಯಿಸಿ ಬೆಂಗಳೂರಿನ ಇಕನಾಮಿಕ್‌ ಅಫೇರ್ನ ಅಪರಾಧ ತನಿಖಾ ವಿಭಾಗದ ಐಜಿಪಿ ಆಗಿ ನೇಮಕ ಮಾಡಲಾಗಿದೆ.

ಅರುಣ್‌ ಚಕ್ರವರ್ತಿ ಈ ಹಿಂದೆ 2016ರಲ್ಲಿ ಪಶ್ಚಿಮ ವಲಯದ ಐಜಿಪಿ ಆಗಿ ಸೇವೆ ಸಲ್ಲಿಸಿದ್ದರು. 2016 ಮೇ 30ರಿಂದ 2016 ಡಿ. 31ರ ತನಕ ಅವರು ಇಲ್ಲಿ ಸೇವೆ ಸಲ್ಲಿಸಿದ್ದು, ಇದೀಗ 2018ರಲ್ಲಿ ಮತ್ತೆ ಪಶ್ಚಿಮ ವಲಯದ ಐಜಿಪಿ ಆಗಿ ನಿಯುಕ್ತರಾಗಿದ್ದಾರೆ.

ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆಗಿದ್ದ ಸುಧೀರ್‌ ಕುಮಾರ್‌ ರೆಡ್ಡಿ ಅವರು ವರ್ಗಾವಣೆಯಾದ ಕೆಲವೇ ದಿನಗಳಲ್ಲಿ ಐಜಿಪಿ ಹೇಮಂತ್‌ ನಿಂಬಾಳ್ಕರ್‌ ಕೂಡ ವರ್ಗವಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next