Advertisement

ಪಶ್ಚಿಮ ವಾಹಿನಿ ಯೋಜನೆ : 8 ಕಿರು ಅಣೆಕಟ್ಟು ಕಾಮಗಾರಿ ಪ್ರಗತಿಯಲ್ಲಿ

01:48 AM Sep 12, 2019 | Sriram |

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಜಾರಿಗೆ ತಂದಿರುವ ಪಶ್ಚಿಮ ವಾಹಿನಿ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಕಿಂಡಿ ಅಣೆಕಟ್ಟು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಸಣ್ಣ ನೀರಾವರಿ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ಅಧ್ಯಕ್ಷತೆಯಲ್ಲಿ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮುಂದಿನ ಮಾರ್ಚ್‌ ಒಳಗೆ ಕಾಮಗಾರಿ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಕಡಿರುದ್ಯಾವರ, ನಿಡ್ಡೋಡಿ, ನಿಟ್ಟಡೆ, ಮಾರೂರು, ಕೊಳವೂರು, ಪುಚ್ಚಮೊಗರು, ಕಪೆì, ಪೊಳಲಿ, ಚಾರ್ವಾಕದಲ್ಲಿ ಅಣೆಕಟ್ಟೆ ನಿರ್ಮಾಣ ನಡೆಯುತ್ತಿವೆ. ಬಿಳಿಯೂರು ಹಾಗೂ ಹರೇಕಳದಲ್ಲಿ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎಂದರು.

ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಜಿಲ್ಲೆಯಲ್ಲಿ ಅಂಗನವಾಡಿಗಳಿಗೆ ಸಂಬಂಧಿಸಿದಂತೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಒಂದು ವಾರದೊಳಗೆ ಸಂಬಂಧಪಟ್ಟ ಅಂಗನವಾಡಿಗಳಿಗೆ ಭೇಟಿ ನೀಡಿ ವರದಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ರೋಗಿಗಳಿಗೆ
ತೊಂದರೆಯಾಗದಿರಲಿ
ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ನಗರದ ಲೇಡಿಗೋಶನ್‌ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳನ್ನು ತುರ್ತು ಸಂದರ್ಭಗಳಲ್ಲಿ ವೆನಾÉಕ್‌ಗೆ ವರ್ಗಾಯಿಸಿದ ಸಂದರ್ಭದಲ್ಲಿ ಅಲ್ಲಿ ದಾಖಲಿಸಲು ವಿಳಂಬ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಇದಕ್ಕೆ ಆಸ್ಪದ ನೀಡದೆ ಎರಡೂ ಆಸ್ಪತ್ರೆಗಳು ರೋಗಿಗಳನ್ನು ವರ್ಗಾಯಿಸುವ ಮೊದಲೇ ಸಮ ನ್ವಯ ದಿಂದ ಕಾರ್ಯ ನಿರ್ವಹಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸಿದ ಅನಂತರ ವರ್ಗಾಯಿಸಬೇಕು ಎಂದು ನಿರ್ದೇಶ ನೀಡಿದರು.ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆರ್‌. ಸೆಲ್ವಮಣಿ ಮೊದಲಾದವರು ಉಪಸ್ಥಿತರಿದ್ದರು.

Advertisement

ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ 387 ಹೆಕ್ಟೇರ್‌ ಭತ್ತದ ಕೃಷಿ ನಾಶವಾಗಿದೆ. ಈಗಾಗಲೇ ಈ ನಷ್ಟವನ್ನು ಸಮೀಕ್ಷೆ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಪ್ರತೀ ಹೆಕ್ಟೇರ್‌ ನಷ್ಟಕ್ಕೆ 6,800 ರೂ. ಪರಿಹಾರ ದೊರಕಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಶಾಲಾ ಕಟ್ಟಡಗಳ ದುರಸ್ತಿ ಕಾಮಗಾರಿಗಳಿಗೆ 10.28 ಕೋಟಿ ರೂ. ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಡಿಡಿಪಿಐ ವೈ. ಶಿವರಾಮಯ್ಯ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next