Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನ್ಯಾಯಮೂರ್ತಿಗಳಿಗೆ ಕೆಲವರು ಜೀವ ಬೆದರಿಕೆ ಹಾಕಿರುವ ಕುರಿತು ವಿಧಾನಸೌಧ ಠಾಣೆ ಯಲ್ಲಿ ದಾಖಲಾಗಿರುವ ದೂರಿನ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಡಿಜಿ ಮತ್ತು ಐಜಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
Related Articles
Advertisement
“ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ’ ಎಂದು ತೀರ್ಪು ನೀಡಿರುವ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಖಾಜಿ ಜೈಬುನ್ನಿಸಾ ಅವರಿಗೆ ತಮಿಳುನಾಡಿನ ಇಸ್ಲಾಮಿಕ್ ಸಂಘಟನೆಯೊಂದು ಬಹಿರಂಗವಾಗಿಯೇ ಕೊಲೆ ಬೆದರಿಕೆ ಹಾಕಿದೆ.
ಮಧುರೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ತಮಿಳುನಾಡು ತೌಹೀದ್ ಜಮಾತ್(ಟಿಎನ್‌ಟಿಜೆ) ಸಂಘಟನೆಯ ನಾಯಕ ಕೊವಾಯಿ ಆರ್. ರೆಹಮತುಲ್ಲಾ, “ಮುಂದೊಂದು ದಿನ ಹಿಜಾಬ್ ತೀರ್ಪು ಕೊಟ್ಟ ಆ ನ್ಯಾಯಮೂರ್ತಿಗಳಿಗೆ ಏನಾದರೂ ಆದರೆ, ಅದಕ್ಕೆ ಅವರೇ ಹೊಣೆಗಾರರು ಹೊರತು ನಾವಲ್ಲ’ ಎಂದು ಹೇಳಿದ್ದರು. ಹಾಗೆಯೇ ಈ ರೀತಿ ಬೆದರಿಕೆ ಹಾಕಿದ್ದಕ್ಕೆ ನಮ್ಮನ್ನು ಜೈಲಿಗೆ ಹಾಕುವುದಾದರೆ ಅದನ್ನು ನಾವು “ಹಿಜಾಬ್‌ಗಾಗಿ ಹೋರಾಡಿ ಜೈಲಿಗೆ ಹೋದದ್ದು’ ಎಂದು ಪರಿಗಣಿಸುತ್ತೇವೆ ಎಂದು ಹೇಳಿದ್ದರು.
ಈ ಹಿನ್ನೆಲೆಯಲ್ಲಿ ರೆಹಮತುಲ್ಲಾ, ಟಿಎನ್‌ಟಿಜೆ ಮಧುರೆ ಜಿಲ್ಲಾ ನಾಯಕ ಅಸಾನ್ ಬಾತ್‌ಶಾ ಹಾಗೂ ಉಪ ಕಾರ್ಯದರ್ಶಿ ಹಬೀಬುಲ್ಲಾ ವಿರುದ್ಧ ಐಪಿಸಿಯ 5 ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಮೂವರೂ ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.