Advertisement
ಬುಧವಾರ ಮಧ್ಯಾಹ್ನದ ಸುಮಾರಿಗೆ ಅರಣ್ಯ ಸಂಚಾರಿ ದಳದವರು 3 ಕಾರಿನಲ್ಲಿ ಕಾರ್ಯಾಚರಣೆ ನಡೆಸಲು ಬಂದಿದ್ದರು. ಈ ವೇಳೆ ನಾಲ್ವರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ವೇಳೆ ಇವರು ಮಾರುವೇಷದಲ್ಲಿ ಇದ್ದುದರಿಂದ ಸ್ಥಳೀಯರು ತಪ್ಪು ಭಾವಿಸಿ, ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಸ್ಥಳದಲ್ಲಿ 7 ಮಂದಿ ಇದ್ದು, ಒಬ್ಬನಲ್ಲಿ 10 ಕೆ.ಜಿ. ತೂಕದ ಅಂಬರ್ಗ್ರೀಸ್ ಇತ್ತು. ಅದನ್ನು ಮತ್ತೂಬ್ಬ ಹಿಡಿದುಕೊಂಡು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಕುಂದಾಪುರ ಎಸ್ಐ ನಂಜ ನಾಯ್ಕ, ಸಿಬಂದಿ ಉಪಸ್ಥಿತರಿದ್ದರು. ಹೆಚ್ಚುವರಿ ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗಿತ್ತು.
Related Articles
ಮಾರುವೇಷದಲ್ಲಿ ಬಂದ ಅಧಿಕಾರಿಗಳು ಇಲ್ಲಿಗೆ ಬಂದು ಪಿಸ್ತೂಲ್ ತೋರಿಸಿ ಬೆದರಿಸಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಇದರಿಂದ ಬೆದರಿ ಹಲ್ಲೆಗೆ ಮುಂದಾಗಿರುವುದಾಗಿ ತಿಳಿಸಿರುವುದಾಗಿ ತಿಳಿದು ಬಂದಿದೆ.
Advertisement
ಅಂಬರ್ ಗ್ರೀಸ್ ಜಾಲ ಸಕ್ರಿಯ?ಅಂಬರ್ ಗ್ರೀಸ್ಗೆ ಕೋಟ್ಯಂತರ ರೂ. ಬೆಲೆಯಿದೆ. ಇದನ್ನು ವಶದಲ್ಲಿ ಇರಿಸಿಕೊಳ್ಳುವುದು ಹಾಗೂ ವ್ಯವಹಾರ ಮಾಡುವುದು ವನ್ಯಜೀವಿ ಸಂರಕ್ಷಣ ಕಾಯ್ದೆಯಡಿ ಅಪರಾಧ. ದೇಶದಲ್ಲಿ ಇದರ ಮಾರಾಟಕ್ಕೆ ನಿರ್ಬಂಧವಿದೆ. ವಿದೇಶದಲ್ಲಿ ಇದಕ್ಕೆ ಭಾರೀ ಬೇಡಿಕೆಯಿದೆ. ಕರಾವಳಿ ಜಿಲ್ಲೆಯಲ್ಲಿ ಇದರ ಜಾಲ ಸಕ್ರಿಯವಾಗಿದೆ ಎಂದು ಹೇಳಲಾಗುತ್ತಿದೆ.