ಲಕ್ನೋ : ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ತಂಡವೊಂದರ ಮೇಲೆ ಉತ್ತರ ಪ್ರದೇಶದ ವಿಶೇಷ ಪೊಲೀಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರನ್ನು ವಶಕ್ಕೆ ಪಡೆದು 4.12 ಕೆ.ಜಿ ತಿಮಿಂಗಿಲ ವಾಂತಿಯನ್ನು ವಶಪಡಿಸಿಕೊಂಡಿದ್ದಾರೆ.
ಉತ್ತರಪ್ರದೇಶದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು ಹತ್ತು ಕೋಟಿ ಮೌಲ್ಯದ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
1972 ರ ವನ್ಯಜೀವಿ (ರಕ್ಷಣೆ) ಕಾಯಿದೆ ಪ್ರಕಾರ ತಿಮಿಂಗಿಲ ವಾಂತಿ ಮಾರಾಟವನ್ನು ನಿಷೇದಿಸಲಾಗಿದೆ ಆದರೂ ಪೋಲೀಸರ ಕಣ್ಣು ತಪ್ಪಿಸಿ ಕಳ್ಳರು ತಮ್ಮ ಕೈಚಳಕವನ್ನು ತೋರಿಸುತ್ತಿದ್ದಾರೆ.
ತಿಮಿಂಗಿಲ ವಾಂತಿಗೆ ಸಾಕಷ್ಟು ಬೇಡಿಕೆ ಇದ್ದು, ಇದು ಚಿನ್ನಕ್ಕಿಂತಲೂ ದುಬಾರಿಯಾಗಿದೆ ಹಾಗಾಗಿ ಕಳ್ಳರು ಕಳ್ಳ ಮಾರ್ಗದ ಮೂಲಕ ಬೇರೆ ಬೇರೆ ದೇಶಗಳಿಗೆ ಮಾರಾಟ ಮಾಡುವ ದಂದೆಯಲ್ಲಿ ತೊಡಗಿದ್ದಾರೆ.
ಈ ವರ್ಷ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ ) ಮಾರಾಟ ಮಾಡುತ್ತಿದ್ದ ಹಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಕಳೆದ ಜುಲೈನಲ್ಲಿ, ಕೇರಳದಲ್ಲಿ 28 ಕೋಟಿ ಮೌಲ್ಯದ ತಿಮಿಂಗಿಲ ವಾಂತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ತಿಮಿಂಗಿಲ ವಾಂತಿಯನ್ನು ಸೌಂದರ್ಯವರ್ಧಕಗಳು ಮತ್ತು ಔಷಧಿಗಳಲ್ಲಿ ಬಳಸಲಾಗುತ್ತದೆ ಅದಕ್ಕಾಗಿ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ ಅಲ್ಲದೆ ಇದು ಚಿನ್ನಕ್ಕಿಂತಲೂ ಬಲು ದುಬಾರಿಯಾಗಿದೆ.