Advertisement
ಹೈಕೋರ್ಟ್ ಕೇಳಿಕೊಂಡಿದ್ದ ಪ್ರಶ್ನೆಗಳು
Related Articles
Advertisement
ಈ ಕುರಿತು ಇಂದು ತೀರ್ಪು ನೀಡಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ರಿಟ್ ಅರ್ಜಿಗಳನ್ನು ವಜಾ ಮಾಡಿದೆ.
ಕೋರ್ಟ್ ತೀರ್ಪಿನ ಪ್ರಮುಖ ಅಂಶಗಳು
1 ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಮಿನ ಅತ್ಯಗತ್ಯ ಆಚರಣೆ ಅಲ್ಲ.
2 ಸಮವಸ್ತ್ರ ನಿಗದಿಪಡಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ.
3 ಸರ್ಕಾರದ ವಸ್ತ್ತಸಂಹಿತೆ ಪ್ರಶ್ನಿಸುವಂತಿಲ್ಲ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿ ಸರ್ಕಾರ ಫೆ.5ರಂದು ಹೊರಡಿಸಿದ್ದ ಆದೇಶ ಕಾನೂನು ಬದ್ದವಾಗಿದೆ.
ಇದನ್ನೂ ಓದಿ:ವಿದ್ಯೆಗಿಂತ ದೊಡ್ಡದು ಯಾವುದೂ ಇಲ್ಲ, ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು: ಬೊಮ್ಮಾಯಿ
4 ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ಕೋರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಹಿನ್ನೆಲೆ: ಉಡುಪಿಯ ಕಾಲೇಜಿನಲ್ಲಿ ಆರಂಭವಾದ ಹಿಜಾಬ್- ಕೇಸರಿ ಶಾಲು ವಿವಾದ ನಂತರ ರಾಜ್ಯದ ಹಲವು ಜಿಲ್ಲೆಗಳಿಗೆ ಹಬ್ಬಿತ್ತು. ಹಲವೆಡೆ ಪ್ರತಿಭಟನೆಗಳು ನಡೆದಿದ್ದವು. ನಂತರ ಸರ್ಕಾರ ಶಿಕ್ಷಣ ಸಂಸ್ಥೆಗಳಿಗೆ ವಸ್ತ್ರಸಂಹಿತೆ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಕೋರ್ಟ್ ಮೆಟ್ಟಿಲೇರಿದ್ದರು.
ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಕಳೆದ ಫೆ.5ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೆಲ ಮುಸ್ಲಿಂ ವಿದ್ಯಾರ್ಥಿನಿಯರೂ ಸೇರಿ 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಎಲ್ಲ ಅರ್ಜಿಗಳ ಕುರಿತು ಸತತ 11 ದಿನಗಳ ಕಾಲ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿ ಫೆ.25ರಂದು ತೀರ್ಪು ಕಾಯ್ದಿರಿಸಿತ್ತು