Advertisement

ಈ ಸರ್ಕಾರದಿಂದ ಏನು ನಿರೀಕ್ಷಿಸಲು ಸಾಧ್ಯ?: ಫೋಟೋ-ವಿಡಿಯೋ ನಿಷೇಧಕ್ಕೆ ಗುಂಡೂರಾವ್

09:37 PM Jul 15, 2022 | Team Udayavani |

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ ಹಾಗೂ ವಿಡಿಯೋ ದೃಶ್ಯ ಮಾಡುವುದನ್ನು ಸರ್ಕಾರ ನಿಷೇಧಿಸಿದೆ.ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಲು ಈ ನಿಷೇಧವೆ? ಸರ್ಕಾರಿ ಕಚೇರಿಗಳು ಭ್ರಷ್ಟರ ತಾಣವಾಗಿವೆ. ಸಾರ್ವಜನಿಕರು ಇತ್ತೀಚೆಗೆ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಮೊಬೈಲ್ ಮೂಲಕ ಬಯಲಿಗೆಳೆದಿದ್ದಾರೆ. ಇದು ಅಪಥ್ಯವೇ? ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಗಳ ಮೂಲಕ ಪ್ರಶ್ನಿಸಿದ್ದಾರೆ.

Advertisement

ಈ ಸರ್ಕಾರ ಕೆಲ ಭ್ರಷ್ಟ ಅಧಿಕಾರಿಗಳೊಂದಿಗೆ ಶಾಮೀಲಾಗಿ 40% ಕಮಿಷನ್ ಹೊಡೆಯುತ್ತಿದೆ. ಸರ್ಕಾರದ ಅನೇಕ ಇಲಾಖೆಗಳು ಸಾರ್ವಜನಿಕರನ್ನು ಸುಲಿಗೆ ಮಾಡುವ ವಸೂಲಿ ಕೇಂದ್ರಗಳಾಗಿವೆ. ಸರ್ಕಾರ ಭ್ರಷ್ಟ ಅಧಿಕಾರಿಗಳಿಗೆ ಕಡಿವಾಣ ಹಾಕುವ ಕೆಲಸ ಮಾಡಬೇಕು. ಅದು ಬಿಟ್ಟು ಫೋಟೋ-ವಿಡಿಯೋ ನಿಷೇಧ ಭ್ರಷ್ಟಾಚಾರಕ್ಕೆ ಲೈಸೆನ್ಸ್ ಕೊಟ್ಟಂತೆ. ಇದು ಭ್ರಷ್ಪಪರ ಸರ್ಕಾರ ಎಂದು ಟ್ವೀಟ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಅಕ್ರಮಗಳನ್ನು ಬಯಲಿಗೆಳೆದು ಜನರೇ ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುತ್ತಿದ್ದಾರೆ. ಇದು ಪಾರದರ್ಶಕ ಸರ್ಕಾರವಾಗಿದ್ದರೆ ಹೀಗೆ ಅಕ್ರಮ ಬಯಲಿಗೆಳೆಯುವ ಜನರ ಬೆನ್ನಿಗೆ ನಿಲ್ಲಬೇಕು. ಆದರೆ ಬೊಮ್ಮಾಯಿ ಸರ್ಕಾರ ನಿಂತಿರುವುದು ಯಾರ ಬೆನ್ನಿಗೆ? ಭ್ರಷ್ಟರ ರಕ್ಷಣೆಗೆ‌ ನಿಂತಿರುವ ಈ ಸರ್ಕಾರದಿಂದ ಏನು ನಿರೀಕ್ಷಿಸಲು ಸಾಧ್ಯ? ಎಂದು ಇನ್ನೊಂದು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next