Advertisement
ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 134 ಶಾಸಕರಿರುವ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಅಸ್ಥಿರ ಮಾಡಲು ಕುಮಾರಸ್ವಾಮಿ ಅವರಿಂದ ಸಾಧ್ಯವಿಲ್ಲ. ಸರ್ಕಾರ ಸುಭದ್ರವಾಗಿದ್ದು, ಸುಸ್ಥಿರ ಆಡಳಿತ ನೀಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
Related Articles
Advertisement
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಹೇಳಿದಂತೆ ಅಚ್ಚೆ ದಿನ್ ಬರಲಿಲ್ಲ, ರೈತರ ಆದಾಯ ದ್ವಿಗುಣಗೊಳ್ಲಲಿಲ್ಲ, ಪ್ರತಿ ವರ್ಷ 2 ಕೋಟಿಯಂತೆ 18 ಲಕ್ಷ ಉದ್ಯೋಗ ಸೃಷ್ಟಿಯಾಗಿಗಲಿಲ್ಲ. ಬದಲಾಗಿ ಪೆಟ್ರೋಲ್, ಡಿಸೇಲ್, ಗ್ಯಾಸ್ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ಬಿಜೆಪಿ ಸಾಧನೆ ಎಂದು ಟೀಕಿಸಿದರು.
ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ. ಇದೀಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಶಕ್ತಿಯೋಜನೆ, ಅನ್ನಭಾಗ್ಯ ಹಾಗೂ ಇದೀಗ ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇತರೆ ಯೋಜನೆಗಳನ್ನು ಅನುಷ್ಠಾನ ಮಾಡಲಿದೆ. ಇದರೊಂದಿಗೆ ರಾಜ್ಯದ ಜನತೆಗೆ ಕೊಟ್ಟ ಮಾತು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಾವಾಗಲೂ ಬದ್ಧವಾಗಿದೆ ಎಂದರು.
ಯಾವುದೇ ಮೀಸಲಾತಿ ಘೋಷಿಸಬೇಕಿದ್ದರೂ ಶೇ.50 ರಷ್ಟು ಮಿತಿ ದಾಟುವಂತಿಲ್ಲ ಎಂಬುದು ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲು ಪ್ರಕರಣದಲ್ಲಿ ಸ್ಪಷ್ಟವಾಗಿ ಗೊತ್ತಿತ್ತು. ಹೀಗಿದ್ದೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಅಧಿಕಾರದಲ್ಲಿದ್ದಾಗ ಅಲ್ಪಸಂಖ್ಯಾತರ ಶೇ.4 ಮೀಸಲು ರದ್ದು ಮಾಡಿದೆ. ಪರಿಶಿಷ್ಟರಿಗೆ ಮೀಸಲು ಪ್ರಮಾಣ ಹೆಚ್ಚಳವನ್ನು ಕೇಂದ್ರ ಸರ್ಕಾರ 9ನೇ ಶಡ್ಯೂಲ್ ತಿದ್ದುಪಡಿ ಮಾಡಬೇಕಿದೆ. ಹೀಗಿದ್ದೂ ಹಿಂದಿನ ಬಿಜೆಪಿ ಸರ್ಕಾರ ಚುನಾವಣೆ ಹಿನ್ನೆಲೆಯಲ್ಲಿ ಮೀಸಲು ಹೆಚ್ಚಳ ಮಾಡಿತ್ತು ಎಂದು ವಾಗ್ದಾಳಿ ನಡೆಸಿದರು.