Advertisement

ಮೈತ್ರಿಯಿಂದ ನಮಗೇನು ಲಾಭ: ಕೈ ನಾಯಕರ ಪ್ರಶ್ನೆ

06:50 AM Jul 24, 2018 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಳ್ಳುವುದರಿಂದ ಕಾಂಗ್ರೆಸ್‌ಗೆ ಯಾವುದೇ ಪ್ರಯೋಜನವಿಲ್ಲ ಎಂದು ಹಾಸನ ಜಿಲ್ಲಾ ಕಾಂಗ್ರೆಸ್‌ ಮುಖಂಡರು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎದುರು ನೇರವಾಗಿ ತಿಳಿಸಿದ್ದಾರೆ.

Advertisement

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಹಾಸನ ಜಿಲ್ಲಾ ಮುಖಂಡರ ಸಭೆಯಲ್ಲಿ, ಮೈತ್ರಿ ಬಗ್ಗೆ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುವ ಮುಂಚೆ, ಹಳೇ ಮೈಸೂರು ಭಾಗದ ಜಿಲ್ಲೆಗಳಾದ ಹಾಸನ, ಮಂಡ್ಯ, ತುಮಕೂರು ಲೋಕಸಭಾ ಕ್ಷೇತ್ರಗಳ ಬಗ್ಗೆ ಪಕ್ಷದ ನಾಯಕರು ಆಲೋಚನೆ ಮಾಡಬೇಕೆಂದು ಹೇಳಿದ್ದಾರೆ ಎನ್ನಲಾಗಿದೆ.

ಮೈತ್ರಿ ಮಾಡಿಕೊಳ್ಳುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಆದರೆ, ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರಿಗೆ ತೊಂದರೆಯಾಗಲಿದೆ. ಇದನ್ನು ಹೈಕಮಾಂಡ್‌ ಗಮನಕ್ಕೆ ತರುವಂತೆ ದಿನೇಶ್‌ ಗುಂಡೂರಾವ್‌ಗೆ ಮಾಜಿ ಸಚಿವ ಎ. ಮಂಜು ಮನವಿ ಮಾಡಿದ್ದಾರೆನ್ನಲಾಗಿದೆ. ಇದಕ್ಕೆ ಸಮಜಾಯಿಷಿ ನೀಡಿರುವ ದಿನೇಶ್‌ ಗುಂಡೂರಾವ್‌, ಚುನಾವಣಾ ಮೈತ್ರಿ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನ ಅಂತಿಮ. ಈ ಬಗ್ಗೆ ಏನನ್ನೂ ಹೇಳಲಾಗುವುದಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next