Advertisement
ವಿಜಯ ನಗರದ ಬಂಟರ ಸಮುದಾಯ ಭವನದಲ್ಲಿ ಬಿಜೆಪಿ ಗುರುವಾರ ಏರ್ಪಡಿಸಿದ್ದ ವಿಧಾನ ಪರಿಷತ್ ಚುನಾವಣೆಯ ದಕ್ಷಿಣ ಪದವೀಧರ ಕ್ಷೇತ್ರದ ಬಿರ್ಜೆ ಮೈ.ವಿ.ರವಿಶಂಕರ್ ಅವರ ಚುನಾವಣಾ ಪ್ರಚಾರ ನಿಮಿತ್ತ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
Related Articles
Advertisement
ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಿಲ್ಲ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರಕುಮಾರ್ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್ ಮತ್ತಿತರ ಕ್ರಾಂತಿಕಾರಿಗಳನ್ನು ಭಯೋತ್ಪಾದಕರೆಂದು ಜರಿದಿದ್ದ ಪಕ್ಷನಾಯಕ ಸಿದ್ದರಾಮಯ್ಯರಿಂದ ಬಿಜೆಪಿ ಪಾಠ ಕಲಿಯಬೇಕಾಗಿಲ್ಲ. ಪಕ್ಷ ನಾಯಕ ಸಿದ್ದರಾಮಯ್ಯ ಭಗತ್ ಸಿಂಗ್‌ರ ಪಾಠವನ್ನು ಪಠ್ಯದಿಂದ ರಾಜ್ಯ ಸರ್ಕಾರ ಕೈಬಿಟ್ಟಿದೆ, ಭಗತ್‌ಸಿಂಗ್ ಸ್ವಾತಂತ್ರ್ಯ ಹೋರಾಟಗಾರ ಎಂದು ಅಪರೂಪಕ್ಕೆ ಹೇಳಿದ್ದಾರೆ. ಆದರೆ, ಇದೇ ಸಿದ್ದರಾಮಯ್ಯ ಅವರು, ಕ್ರಾಂತಿಕಾರಿಗಳಾಗಿ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದ ಭಗತ್ ಸಿಂಗ್, ಉದಮ್‌ಸಿಂಗ್, ಚಂದ್ರಶೇಖರ್ ಆಜಾದ್ ಅವರನ್ನು ಭಯೋತ್ಪಾದಕರು, ಅವರು ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ಹೇಳಿದ್ದರು ಎಂಬುದನ್ನು ಮರೆಯಬಾರದು. ಈಗ ಅವರಿಗೆ ಸತ್ಯದ ಅರಿವು ಆಗಿದೆ ಎಂದು ಟಾಂಗ್ ನೀಡಿದರು. ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್, ಶಾಸಕ ರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಪ್ರೀತಂಗೌಡ, ಎನ್.ಮಹೇಶ್, ನಿರಂಜನ್ ಕುಮಾರ್, ಹರ್ಷವರ್ಧನ್, ರವಿಕುಮಾರ್, ಮಾಜಿ ಎಂಎಲ್‌ಸಿ ಸಿದ್ದರಾಜು, ಮೇಯರ್ ಸು ನಂದಾ ಫಾಲನೇತ್ರ, ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್, ರಾಜೇಂದ್ರ, ಮಾಜಿ ಸಚಿವ ಸಿ.ಎಚ್.ಜಯಶಂಕರ್, ಮಾಜಿ
ಶಾಸಕರಾದ ತೋಂಟದಾರ್ಯ ಸೇರಿದಂತೆ ಅನೇಕ ಮುಖಂಡರು ಇದ್ದರು. ಸಭೆಯ ನಡುವೆ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರು ನಾಯಕರೊಂದಿಗೆ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರಸಲ್ಲಿಸಿ ಹಿಂದಿರುಗಿದರು. ಬಳಿಕ ಚುನಾವಣಾ ಪ್ರಚಾರ ಸಭೆ ನಡೆಯಿತು. ಕುರುಬ ಸಮುದಾಯಕ್ಕೆ ಕೊಡುಗೆ ಏನು?: ಸತತ ಐದು ವರ್ಷ ಮುಖ್ಯಮಂತ್ರಿಯಾಗಿದ್ದ ಸಿದ್ದ ರಾಮಯ್ಯ ಅವರಿಂದ ಬೇರೆ ವರ್ಗದ ಜನರಿಗೆ ಇರಲಿ. ಕುರುಬ ಸಮುದಾಯಕ್ಕೆ ಏನು ಕೊಡುಗೆ ನೀಡಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು. ಕಾಂಗ್ರೆಸ್, ಜೆಡಿಎಸ್ ಪಕ್ಷದ ಕೆಲ ನಾಯಕರು ಪಕ್ಷದಲ್ಲಿನ ರಾಜಕಾರಣದಿಂದ ಬೇಸತ್ತಿದ್ದಾರೆ. ಬಿಜೆಪಿ ಹೂವಿನ ಸಮುದ್ರವಾಗಿದ್ದು, ಭ್ರಷ್ಟಚಾರ ಮುಕ್ತರಾಗಿದೆ. ಇಲ್ಲಿಗೆ ಯಾರೂ ಬೇಕಾದರೂ ಬರಬಹುದಾಗಿದ್ದು, ಈ ಮೂಲಕ ಭದ್ರ ಬುನಾದಿಯಡಿ ದೇಶ ನಿರ್ಮಾಣ ಮಾಡೋಣ ಎಂದು ಕರೆ ನೀಡಿದರು. ಈ ವಿಧಾನ ಪರಿಷತ್ ಚುನಾವಣೆ ಮುಂದಿನ ವಿಧಾನ ಸಭೆ ಚುನಾವಣೆಗೆ ನಾಂದಿಯಾಗಲಿದ್ದು, ಈ ನಾಲ್ಕು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಾತಾವರಣವಿದೆ ಎಂದು ಹೇಳಿದರು.