Advertisement
ಕರಾವಳಿಗೆ ಸಿಕ್ಕಿದ್ದೇನು?
Related Articles
Advertisement
ಗುರುಪುರ ಮತ್ತು ನೇತ್ರಾವತಿ ನದಿಗಳ ಪಾತ್ರದಲ್ಲಿ ಒಳಸಾರಿಗೆ ಸಂಪರ್ಕ ಕಲ್ಪಿಸಲು ಬಾರ್ಜ್ ಸೇವೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು. ಮಂಗಳೂರು- ಹಂಗಾರಕಟ್ಟೆಯಲ್ಲಿ ಸಾರ್ವಜನಿಕ- ಖಾಸಗಿ light cargo transport ಬೋಟ್ ಸೇವೆಗಳನ್ನು ಪ್ರಾರಂಭಿಸಲಾಗವುದು.
ಮಂಗಳೂರು- ಕಾರವಾರ- ಗೋವಾ- ಮುಂಬಯಿ ಜಲಸಾರಿಗೆ ಅಭಿವೃದ್ಧಿ.
ಕರಾವಳಿ ವಲಯ ನಿರ್ವಹಣೆ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಧಾರ್ಮಿಕ, ಸಾಹಸ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೂಪುರೇಷೆ ತಯಾರಿಸಲಾಗುವುದು.
ಉಡುಪಿ, ದಕ್ಷಿಣ ಮತ್ತು ಉತ್ತರ ಕನ್ನಡದಲ್ಲಿನ ವಸತಿ ಶಾಲೆಗಳ ಅಭಿವೃದ್ಧಿ ಮಾಡಲಾಗುವುದು.
ಕುಮಟಾದಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣ. ಕರಾವಳಿ ಮಲೆನಾಡಿಗೆ ‘ಸಹ್ಯಾದ್ರಿ ಸಿರಿ’ ಯೋಜನೆ ಜಾರಿ ಮಾಡಲಾಗುವುದು ಎಂದು ಘೋಷಿಸಿದರು.
ಇದನ್ನೂ ಓದಿ:ಕುಮಟಾ- ಸವಣೂರಿನಲ್ಲಿ ಬೃಹತ್ ಆಸ್ಪತ್ರೆ ನಿರ್ಮಾಣ; ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಯೋಜನೆ ಆರಂಭಿಸಲಾಗಿದ್ದು, ಇದನ್ನು ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಮನ್ವಯಗೊಳಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ತಿಳಿಸಿದ್ದಾರೆ.
ಮೀನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರವಾರದ ಸಮೀಪ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಘೋಷಿಸಿದರು. ಅಲ್ಲದೇ ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಮಾರ್ಪಡಿಸಲು 40 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಘೋಷಿಸಿದ್ದಾರೆ.