Advertisement

Personal ಸಹಾಯಕ್ಕೆ ಅನಗತ್ಯ ಬಣ್ಣ ಕಟ್ಟಿದರೆ ಇನ್ನೇನು ಹೇಳುವುದು :ಡಾ.ಹೆಚ್.ಸಿ.ಮಹದೇವಪ್ಪ

07:56 PM Nov 08, 2023 | Team Udayavani |

ಬೆಂಗಳೂರು: ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗ ರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ”ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ. ಆದರೆ ಹಿಂದೆ Hip joint knee ತೊಂದರೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ. ಇನ್ನು ಬಹು ವರ್ಷಗಳ ಕಾಲ ನನ್ನೊಡನೆಯೇ ಒಂದು ಕುಟುಂಬದಂತೆ ಇರುವ ನಮ್ಮ ಕೆಲ ಸಿಬಂದಿಗಳ ಬಳಿ ಕಾಲಿನ ಸಮಸ್ಯೆಯ ಹಿನ್ನಲೆಯಲ್ಲಿ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದ್ದು ಅನಗತ್ಯವಾಗಿ ಇದಕ್ಕೆ ಅಂಹಕಾರ, ಅಧಿಕಾರದ ಅಮಲು ಎಂಬ ಶಬ್ದಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ” ಎಂದು ಹೇಳಿದ್ದಾರೆ.

”ಇನ್ನು ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿರುವ ಕಾರಣ ಈ ಬಗ್ಗೆ ಸ್ವಯಂ ವಿವರಣೆ ಕೊಡುವುದಾಗಲೀ ಇಲ್ಲವೇ ಸ್ವ ಮರುಕ ಪಡುವುದಾಗಲೀ ನಾನು ಮಾಡುವುದಿಲ್ಲ.ಮೂಲತಃ ಸಂವಿಧಾನದ ಆಶಯಗಳ ಪ್ರಕಾರವೇ ಬದುಕುವ ನನಗೆ ಸಮಾನತೆ, ವ್ಯಕ್ತಿ ಗೌರವ, ಪ್ರೀತಿ ವಿಶ್ವಾಸ ಹೊರತು ಪಡಿಸಿ ಇತರೆ ಸಂಗತಿಗಳಲ್ಲಿ ಆಸಕ್ತಿ ಇಲ್ಲ.ದೈಹಿಕ ತೊಂದರೆಗಾಗಿ ಪಡೆದ ಸಹಾಯವನ್ನು ಸಂಕುಚಿತ ಮನಸ್ಸಿನಿಂದ ನೋಡಬಾರದೆಂದು ನಮ್ಮ ಮಾಧ್ಯಮ ಮಿತ್ರರಲ್ಲಿ ನಾನು ಮನವಿ ಮಾಡುತ್ತೇನೆ.ಇನ್ನು ಅಗತ್ಯ ಸಹಾಯ ಮಾಡಿದುದಕ್ಕಾಗಿ ನನ್ನ ಅಂಗರಕ್ಷಕನಿಗೆ ನನ್ನ ಧನ್ಯವಾದಗಳು” ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next