Advertisement

ಪ್ರಧಾನಿಗೆ ಭದ್ರತಾ ಲೋಪ : ಸಿಎಂ ಸೇರಿ ಹಲವರಿಂದ ವ್ಯಾಪಕ ಖಂಡನೆ

06:01 PM Jan 05, 2022 | Team Udayavani |

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪಂಜಾಬ್ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪಕ್ಕೆ ಬಿಜೆಪಿ ನಾಯಕರು ವ್ಯಾಪಕ ಆಕ್ರೋಶ ಹೊರ ಹಾಕಿದ್ದು, ಪಂಜಾಬ್ ಕಾಂಗ್ರೆಸ್ ಸರಕಾರದ ವಿರುದ್ಧ ಹಲವರು ಕಿಡಿ ಕಾರಿದ್ದಾರೆ.

Advertisement

”ಪ್ರಧಾನಿ ನರೇಂದ್ರ ಮೋದಿಜೀ ಅವರು ಇಂದು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ನಡೆಯಬಾರದು. ಇದೇ ಸಂದರ್ಭದಲ್ಲಿ ಇದು ಒಂದು ಸಹಜ ಘಟನೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣಜೀತ್ ಸಿಂಗ್ ಚೆನ್ನಿ ಅವರು ನೀಡಿರುವ ಬೇಜವಾಬ್ದಾರಿ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಖಂಡನೀಯ

”ಪ್ರಧಾನಿ ಮೋದಿ ಅವರು ಅತ್ಯಂತ ಪ್ರಮುಖ ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ ಮಾಡುವ ಸರ್ಕಾರಿ ಕಾರ್ಯಕ್ರಮಕ್ಕೆ ಹೋಗುವಾಗ ಅವರನ್ನು ತಡೆದ ಪಂಜಾಬ್‌ ಕಾಂಗ್ರೆಸ್ ಭದ್ರತೆಯ ನಿಯಮಗಳನ್ನು ಗಾಳಿಗೆ ತೂರಿ ದೇಶದ ಪ್ರಧಾನಿ ಒಬ್ಬರನ್ನು 20 ನಿಮಿಷಗಳ ಕಾಲ ನಡುರಸ್ತೆಯಲ್ಲಿ ನಿಲ್ಲುವಂತೆ ಮಾಡಿದೆ.ಪಂಜಾಬ್ ಸರ್ಕಾರದ ಈ ನಡೆ ಖಂಡನೀಯ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಮತ್ತು ಪಂಜಾಬ್ ಸಿಎಂ ಚನ್ನಿ ಮಾರ್ಗದರ್ಶನ

Advertisement

”ಯೇ ಖುದ್ರಾತಿ ಹುವಾ, ಇದು ಸಹಜವಾಗಿಯೇ ಪಂಜಾಬ್ ಸಿಎಂ ಚರಂಜಿತ್ ಚನ್ನಿ ಅವರ ಪರಿಹಾಸ್ಯವಾಗಿದೆ. 1962 ರ ಪ್ರಮಾದ, ತುರ್ತುಪರಿಸ್ಥಿತಿ ಹೇರಿಕೆ, ಆಪರೇಷನ್ ಬ್ಲೂ ಸ್ಟಾರ್ ಮತ್ತು ಇಂದು ಇದು. ಗಾಂಧೀಜಿಯವರು ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ವಿಸರ್ಜಿಸಬೇಕೆಂದು ಬಯಸಿದರಲ್ಲಿ ಆಶ್ಚರ್ಯವಿಲ್ಲ” ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿದ್ದಾರೆ.

ಪ್ರತಿಭಟನಾಕಾರರು ಫ್ಲೈಓವರ್ ಮೇಲೆ ಪ್ರಧಾನಿ ಬೆಂಗಾವಲು ಪಡೆಯನ್ನು ತಡೆದರು. ಅದಕ್ಕೂ ಮುನ್ನ ಪ್ರತಿಭಟನಾಕಾರರು ಬೆಂಗಾವಲು ಪಡೆಯ ಉದ್ದಕ್ಕೂ ಸುಮಾರು 500 ಮೀಟರ್‌ಗಳಷ್ಟು ಓಡಿದರು. ಇದು ಕಾಂಗ್ರೆಸ್ ಮತ್ತು ಪಂಜಾಬ್ ಸಿಎಂ ಚನ್ನಿ ಮಾರ್ಗದರ್ಶನದ ಅಡಿಯಲ್ಲಿ ನಡೆದ ಆಡಳಿತಾತ್ಮಕ ಮತ್ತು ಭದ್ರತಾ ಉಲ್ಲಂಘನೆಯಾಗಿದೆ #ಭಾರತ್ ಮೋದಿಜಿ ಜೊತೆ ನಿಂತಿದೆ ಎಂದು ಇನ್ನೊಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜೀವಂತವಾಗಿ ಬಂದಿದ್ದೇನೆ…ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ-ಮೋದಿ;ಪಂಜಾಬ್ ನಲ್ಲಿ ನಡೆದಿದ್ದೇನು?

ಸಚಿವ ಸುನಿಲ್ ಕಿಡಿ

”ತುರ್ತು ಪರಿಸ್ಥಿತಿ ಹೇರಿ ಜನರ ಸ್ವಾತ್ಯಂತ್ರ ಕಸಿದುಕೊಂಡಿದ್ದ ಕಾಂಗ್ರೆಸ್ ಇಂದು ಪಂಜಾಬ್ ನಲ್ಲಿ ಪ್ರಧಾನಮಂತ್ರಿಗಳ ಭದ್ರತೆಯನ್ನೇ ಬುಡಮೇಲು ಮಾಡಲು ಪ್ರಯತ್ನಿಸಿದ ಘಟನೆಯನ್ನ ನಾನು ಸಂಪೂರ್ಣವಾಗಿ ಖಂಡಿಸುತ್ತೇನೆ. ಇಂತಹ ಬೆದರಿಕೆಗಳಿಗೆ ಎಂದಿಗೂ ಜಗ್ಗುವುದಿಲ್ಲ. ಕಾಂಗ್ರೆಸ್ ಇದಕ್ಕೆ ತಕ್ಕ ಬೆಲೆಯನ್ನ ಶೀಘ್ರದಲ್ಲೆ ತೆರಲಿದೆ.” ಎಂದು ಸಚಿವ ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಪಂಜಾಬ್ ಸರ್ಕಾರ ವಜಾ ಮಾಡಿ, ಸಿಎಂ ಬಂಧಿಸಿ

ರಾಷ್ಟ್ರದ ಜನಪ್ರಿಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ಭದ್ರತೆಯ ವಿಚಾರದಲ್ಲಿ ವಿಫಲತೆಗೆ ಪಂಜಾಬಿನ ಕಾಂಗ್ರೆಸ್ ಸರ್ಕಾರವೇ ಕಾರಣ. ಇದು ಉದ್ದೇಶಪೂರ್ವಕವಾದ ರಾಜಕೀಯದ ದುರುದ್ದೇಶದ ಕ್ರಮ. ವಿಶ್ವವಂದ್ಯ ನರೇಂದ್ರ ಮೋದಿ ಅವರ ಪ್ರಾಣಕ್ಕೆ ಸಂಚಕಾರ ತರುವಂತೆ ವರ್ತಿಸಿದ ಪಂಜಾಬ್ ಸರ್ಕಾರವನ್ನು ಈ ಕೂಡಲೇ ವಜಾ ಮಾಡಿ ಅಲ್ಲಿನ ಮುಖ್ಯಮಂತ್ರಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next